ಮಂಗಳೂರು(ದಕ್ಷಿಣ ಕನ್ನಡ): ನಗರದ ಗರೋಡಿ ಸಮೀಪ ನ.19ರಂದು ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಆರೋಪಿ ಶಾರಿಕ್ನ ವಿಚಾರಣೆ ಆರಂಭಿಸಿದ್ದಾರೆ.
ಶಾರಿಕ್ ಸುಟ್ಟ ಗಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಬಹುತೇಕ ಚೇತರಿಸಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‌ಐಎ ತಂಡ ಆತನನ್ನು ತೀವ್ರ ವಿಚಾರಣೆಗೊಳಪಡಿಸುತ್ತಿದೆ.
ಕುಕ್ಕರ್ ಬಾಂಬ್ ಸ್ಫೋಟಗೊಂಡ ಪರಿಣಾಮ ಶಾರಿಕ್ ದೇಹದಲ್ಲಿ ಶೇ.45ರಷ್ಟು ಸುಟ್ಟ ಗಾಯಗಳಾಗಿತ್ತು. ಅಲ್ಲದೆ ಶ್ವಾಸಕೋಶದೊಳಗೆ ರಾಸಾಯನಿಕಯುಕ್ತ ಹೊಗೆ ಕೂಡ ಸೇರಿದ್ದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಆತನು ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಎನ್‌ಐಎ ತಂಡ ವಿಚಾರಣೆಯನ್ನು ತೀವ್ರಗೊಳಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಶಾರಿಕ್ ಆರೋಗ್ಯ ಸುಧಾರಣೆಯ ನಂತರ ಹೆಚ್ಚಿನ ಮಾಹಿತಿ ಸಂಗ್ರಹ: ಸಚಿವ ಆರಗ ಜ್ಞಾನೇಂದ್ರ