ಮಂಗಳೂರು: ಜನರಲ್ಲಿರುವ ತಪ್ಪು ತಿಳಿವಳಿಕೆಯಿಂದ ಇತ್ತೀಚೆಗೆ ಕೊರೊನಾ ಸೋಂಕಿತ ಮೃತ ಮಹಿಳೆಯ ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಇದೀಗ ನಗರದ ಯಾವುದೇ ಸ್ಮಶಾನಗಳಲ್ಲಿ ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನಡೆಸಲು ನಾಗರಿಕರ ವಿರೋಧವಿಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಹೇಳಿದರು.
ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನಡೆಸಿದರೆ ಸೋಂಕು ಹರಡುವುದಿಲ್ಲ. ಇದರಿಂದ ಸುತ್ತಲಿನ ಜನರಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಮನೆಯವರಿಗೇ ಈ ಸ್ಥಿತಿ ಒದಗಿದಲ್ಲಿ ನಾವು ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುತ್ತೇವೆಯೇ ಎಂಬ ಮಾನವೀಯತೆ ದೃಷ್ಟಿಯಿಂದ ಇದನ್ನು ಪರಿಗಣಿಸಬೇಕು ಎಂದು ಹೇಳಿದರು.
ಮೊನ್ನೆಯ ಘಟನೆ ಮತ್ತೆ ಮರುಕಳಿಸಬಾರದು. ಕೊರೊನಾ ಸೋಂಕಿನಿಂದ ಯಾರಾದರೂ ಮೃತಪಟ್ಟಲ್ಲಿ ಅವರ ಅಂತ್ಯಸಂಸ್ಕಾರಕ್ಕೆ ಯಾರೂ ಅಡ್ಡಿ ಪಡಿಸಬಾರದು ಎಂದರು.
ಅಲ್ಲದೆ ಇನ್ನು ಮುಂದೆ ಮಂಗಳೂರು ಮಹಾನಗರ ಪಾಲಿಕೆಯ ಯಾವುದೇ ಸ್ಮಶಾನದಲ್ಲಿ ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನಡೆಸಲು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಮೇಯರ್ ದಿವಾಕರ ಪಾಂಡೇಶ್ವರ ಹೇಳಿದರು.