ETV Bharat / state

ಗಾಯಗೊಂಡ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪೊಲೀಸರು - ಮಾನವೀಯತೆ ಮೆರೆದ ಪೊಲೀಸರು

ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬರದ ಹಿನ್ನೆಲೆ ತಮ್ಮ ಸ್ವಂತ ಖರ್ಚಿನಲ್ಲಿ ಆಟೋ ಮಾಡಿಸಿಕೊಂಡು ವೃದ್ಧನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ವೃದ್ಧ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Puttru police
ಪುತ್ತೂರು ಪೊಲೀಸರು
author img

By

Published : Feb 12, 2021, 8:42 PM IST

ಪುತ್ತೂರು (ದ.ಕ): ಗಾಯಗೊಂಡು ನರಳುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಪುತ್ತೂರು ನಗರ ಠಾಣೆಯ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ತಲೆ ಹಾಗೂ ಮುಖದ ಭಾಗದಲ್ಲಿ ಗಾಯಗೊಂಡು ಪುತ್ತೂರು ಹೊರವಲಯದ ಕೋಡಿಂಬಾಡಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಬಿದ್ದಿದ್ದರು. ಇದನ್ನು ಕಂಡ ಪುತ್ತೂರು ನಗರ ಠಾಣೆಯ ಸಿಬ್ಬಂದಿ ಶ್ರೀಶೈಲ ಮತ್ತು ಬಸವರಾಜ್, ತಕ್ಷಣ ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ.

ಗಾಯಗೊಂಡ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ತೂರು ಪೊಲೀಸರು

ಆದರೆ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬರದ ಹಿನ್ನೆಲೆ ತಮ್ಮ ಸ್ವಂತ ಖರ್ಚಿನಲ್ಲಿ ಆಟೋ ಮಾಡಿಸಿಕೊಂಡು ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ವೃದ್ಧ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ದಂಪತಿ ಮೇಲೆ ದಾಳಿ ಮಾಡಿ ಮರವೇರಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.