ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರದಲ್ಲಿ ಕಾರ್ಯಕ್ರಮ ಮುಗಿಸಿದ ಬಳಿಕ ಎನ್ಎಂಪಿಎ ಹೆಲಿಪ್ಯಾಡ್ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದರು.
ವಿವಿಧ ಯೋಜನೆಗಳಿಗೆ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಚಾಲನೆ ನೀಡಿ, ಸಾರ್ವಜನಿಕ ಸಭೆ ನಡೆಸಿದ ಬಳಿಕ ಎನ್ಎಂಪಿಎ ಹೆಲಿಪ್ಯಾಡ್ ಬಳಿ ಬಿಜೆಪಿ ನಾಯಕರೊಂದಿಗೆ ಕೋರ್ ಕಮಿಟಿ ಸಭೆ ನಡೆಸಿದರು. ಈಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಮುಖಂಡ ಸಿ.ಟಿ ರವಿ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪ್ರಧಾನಿ ಮೋದಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲೂ ತಿಳಿಸಿದ್ದು, ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗೆ ಸಿಗಬೇಕು. ಸರ್ಕಾರದ ಅಂಕಿಅಂಶ ಆಗಿರದೇ ನಿಜವಾದ ಫಲಾನುಭವಿಗಳಿಗೆ ತಲುಪಲು ಪ್ರಯತ್ನಿಸಿ ಎಂದು ತಿಳಿಸಿದ್ದಾರೆ ಎಂದರು.
ಇನ್ನು ವಿಧಾನಸಭಾ ಚುನಾವಣೆಗೆ ಈಗಾಗಲೇ ತಯಾರಿ ನಡೆಸಿದ್ದು, ರಾಜ್ಯದ ಏಳು ಕಡೆ ದೊಡ್ಡ ಸಮಾವೇಶ ಮಾಡಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮಂಗಳೂರು: ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ