ಬಂಟ್ವಾಳ/ದಕ್ಷಿಣ ಕನ್ನಡ: ಕೊರೊನಾ ಹಾಗೂ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಹಕ್ಕಿ ಜ್ವರದ ಬಗ್ಗೆ ತಾಲೂಕು ಪಂಚಾಯಿತಿಯ ಸದಸ್ಯರು ಆತಂಕ ವ್ಯಕ್ತಪಡಿಸಿದ್ದರು.
ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಮತ್ತು ಪಶುವೈದ್ಯಕೀಯ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಡಾ.ಹೆನ್ರಿ, ಕೊರೊನಾ ಮತ್ತು ಹಕ್ಕಿಜ್ವರದ ಕುರಿತು ಆತಂಕ ಬೇಡ. ಕೋಳಿ ಮಾಂಸ ಸೇವಿಸಬಹುದು ಎಂದು ಸ್ಪಷ್ಟನೆ ನೀಡಿ ಕೆಲವು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.