ಉಳ್ಳಾಲ: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಕೋಡಿಯ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಸತತ ನಾಲ್ಕು ದಿನಗಳಲ್ಲಿ ಎಸ್‍ಐ ಸಹಿತ ಮೂವರು ಮಹಿಳೆಯರಿಗೆ ಸೋಂಕು ವಕ್ಕರಿಸಿದೆ.
ಸೋಂಕು ತಗುಲಿದ್ದ ಓರ್ವ ಮಹಿಳೆ ಮೃತಪಟ್ಟಿದ್ದು,ಸ್ಥಳೀಯಯರ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಎಸ್‍ಐಗೆ ಸೋಂಕು ತಗುಲಿದ್ದು, ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ. ಠಾಣೆಯ ಎಲ್ಲಾ ಸಿಬ್ಬಂದಿ ಸ್ವಯಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಇನ್ನೊಂದೆಡೆ ಉಳ್ಳಾಲ ಆಝಾದ್ ನಗರದ ನಾಲ್ಕು ಮನೆಗನ್ನು ಸೀಲ್‍ಡೌನ್ ಮಾಡಿ 26 ಮಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಎರಡು ಆಸ್ಪತ್ರೆಗಳನ್ನು ಸೀಲ್‍ಡೌನ್ ಮಾಡಲಾಗಿದ್ದು, ಒಟ್ಟು 30 ಸಿಬ್ಬಂದಿ ಕ್ವಾರಂಟೈನ್‍ನಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ
ಇನ್ನು ಶಾಸಕ ಯು.ಟಿ. ಖಾದರ್ ಮಾತನಾಡಿ, ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತೋರಿಸದೆ ಜ್ವರ ಬಂದಲ್ಲಿ ತಕ್ಷಣ ಪರೀಕ್ಷೆ ನಡೆಸಬೇಕು. ನಾಲ್ಕು ಪ್ರಕರಣಗಳಿಂದ ಸೋಂಕು ಇನ್ನಷ್ಟು ಹರಡುವ ಸಾಧ್ಯತೆ ಇದ್ದು ಸಾಮಾಜಿಕ ಅಂತರ ಕಾಪಾಡುವುದರೊಂದಿಗೆ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿ. ಈ ವ್ಯಾಪ್ತಿಯಲ್ಲಿ ಶುಕ್ರವಾರದ ನಮಾಝ್‍ಗೆ ಮಸೀದಿಯನ್ನು ತೆರೆಯುವುದಿಲ್ಲ. ಮನೆಯಲ್ಲೇ ನನಾಜ್ ಮಾಡಿ ಎಂದು ಮನವಿ ಮಾಡಿದ್ದಾರೆ.