ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೂರರ ಸನಿಹಕ್ಕೆ ತಲುಪಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 99 ಮಂದಿ ಸಾವನ್ನಪ್ಪಿದ್ದು, ಸೋಂಕಿನ ಹಾವಳಿ ಆರಂಭದಿಂದಲೂ ಸಾವಿನ ಸರಣಿ ನಿಂತಿಲ್ಲ. ಪ್ರಾರಂಭದಲ್ಲಿ ವಾರಕ್ಕೊಂದು ಸಾವಿನ ಪ್ರಕರಣ ಆಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ನಿತ್ಯ ಸಾವಿನ ಪ್ರಕರಣಗಳು ವರದಿಯಾಗುತ್ತಿದೆ. ನಿನ್ನೆ ಒಂದೇ ದಿನ ಕೊರೊನಾದಿಂದ ಏಳು ಮಂದಿ ಸಾವನ್ನಪ್ಪಿದ್ದಾರೆ.
ಸಾವಿನ ಪ್ರಕರಣ ಹೆಚ್ಚಳವಾಗುತ್ತಿದ್ದಂತೆ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ.
ಈ ಹಿಂದೆ ಬೆರಳೆಣಿಕೆಯ ಪ್ರಕರಣ ವರದಿಯಾಗುತ್ತಿದ್ದವು. ಆದರೆ, ಇತ್ತೀಚೆಗೆ ಇನ್ನೂರರ ಆಸುಪಾಸಿನಲ್ಲಿ ಪ್ರಕರಣಗಳು ದೃಢಪಡುತ್ತಿವೆ. ನಿನ್ನೆ ಒಂದೇ ದಿನ 218 ಪ್ರಕರಣಗಳು ಪತ್ತೆಯಾಗುವ ಮೂಲಕ ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.