ಮಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇಬ್ಬರಿಗೆ ಇಂದು ಮಂಗಳೂರಿನಲ್ಲಿ ಕೊರೊನಾ ದೃಢಪಟ್ಟಿದೆ.
50 ವರ್ಷದ ಮಹಿಳೆ ಮತ್ತು 26 ವರ್ಷದ ಪುರುಷನಿಗೆ ಕೊರೊನಾ ದೃಢಪಟ್ಟಿದೆ. ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ 33ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕುಲಶೇಖರದ 80 ವರ್ಷದ ಕೊರೊನಾ ಸೋಂಕಿತ ವೃದ್ಧೆಯ ಸಂಪರ್ಕದಲ್ಲಿದ್ದ ಇಬ್ಬರಿಗೆ ಇಂದು ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಇದರಲ್ಲಿ 14 ಮಂದಿ ಗುಣಮುಖರಾಗಿದ್ದಾರೆ. ಇನ್ನೂ ಮೂವರು ಸಾವನ್ನಪ್ಪಿದ್ದು, 16 ಮಂದಿ ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.