ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು 7 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಹಿಂದೆ ಕಳುಹಿಸಲಾದ 11 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ಬಂದಿದ್ದು, ಇದರಲ್ಲಿ 7 ಮಂದಿಯದು ನೆಗೆಟಿವ್ ಬಂದಿದೆ. ನಾಲ್ಕು ಮರು ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. ನಿನ್ನೆ ಓರ್ವ ವ್ಯಕ್ತಿಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಇಂದು 104 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 37907 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 2448 ಮಂದಿ ಇದ್ದು, 27 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 27 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.