ಮಂಗಳೂರು : ಕೊರೊನಾ ವೈಸರ್ ತನಗೂ ಬರಬಹುದೆಂದ ಭೀತಿಯಲ್ಲಿ ವ್ಯಕ್ತಿಯೋರ್ವ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಅಬೆಟ್ಟು ಎಂಬಲ್ಲಿ ನಡೆದಿದೆ.
ಅಬೆಟ್ಟು ನಿವಾಸಿ ಸದಾಶಿವ ಶೆಟ್ಟಿ (55) ಆತ್ಮಹತ್ಯೆ ಶರಣಾದ ವ್ಯಕ್ತಿ. ಕೊರೊನಾ ವೈರಸ್ ಹರಡುವ ಭಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಇದರಿಂದ ಬೇಸತ್ತ ವ್ಯಕ್ತಿ ನಿನ್ನೆ ರಾತ್ರಿ ಮನೆ ಗೋಡೆ ಮೇಲೆ ಕಾರಣ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಪೆಟ್ರೋಲ್ ಬಂಕ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಎರಡು ದಿನಗಳ ಹಿಂದೆ ಆತ್ಯಹತ್ಯೆಗೆ ಯತ್ನಿಸಿದ್ದನೆಂತೆ.
ಘಟನೆ ತಿಳಿದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.