ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿಯಲ್ಲಿ ಓರ್ವ ಗುಣಮುಖರಾಗಿದ್ದಾನೆ.
12 ಮಂದಿಗೆ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಪ್ಪಿನಂಗಡಿಯ ದಂಪತಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು, ಪತಿ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವರ ಪತ್ನಿಗೆ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ 13 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಸಾವನ್ನಪ್ಪಿದ್ದು, 12 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.