ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಕೊರೊನಾ ಸೋಂಕಿತ ಮಹಿಳೆ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಂಟ್ವಾಳದ 69 ವರ್ಷದ ಮಹಿಳೆ ಗುಣಮುಖರಾವದರು. ಇವರು ಮೇ 1 ರಂದು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 14 ಮತ್ತು 16 ರಂದು ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದಾಗ ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಗುಣಮುಖರೆಂದು ಘೋಷಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇಂದು 98 ಮಂದಿಯ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು 129 ಮಂದಿಯ ಗಂಟಲು ದ್ರವದ ವರದಿ ನಿರೀಕ್ಷಿಸಲಾಗುತ್ತಿದೆ. ಇಂದು 51 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಈವರೆಗೆ ಒಟ್ಟು 41,347 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.
ಮಂಗಳೂರಿನ ಎನ್ಐಟಿಕೆಯಲ್ಲಿ 33 ಮತ್ತು ಇಎಸ್ಐ ಆಸ್ಪತ್ರೆಯಲ್ಲಿ 9 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಈವರೆಗೆ 5,022 ಗಂಟಲು ದ್ರವದ ವರದಿ ಬಂದಿದ್ದು, ಅದರಲ್ಲಿ 4,968 ನೆಗೆಟಿವ್ ಮತ್ತು 54 ಪಾಸಿಟಿವ್ ಬಂದಿದೆ. ಇಂದು 81 ಗಂಟಲು ದ್ರವದ ವರದಿ ಬಂದಿದ್ದು ಅದರಲ್ಲಿ 2 ಪಾಸಿಟಿವ್ ಮತ್ತು 79 ನೆಗೆಟಿವ್ ಬಂದಿದೆ. ಒಟ್ಟಾರೆ ಜಿಲ್ಲೆಯಲ್ಲಿ 54 ಮಂದಿ ಸೋಂಕಿತರಲ್ಲಿ 17 ಮಂದಿ ಗುಣಮುಖರಾಗಿದ್ದು, ಐವರು ಸಾವನ್ನಪ್ಪಿ 32 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.