ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೋವಿಡ್-19ರ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ನಿನ್ನೆ ಪ್ರಯೋಗಾಲಯಕ್ಕೆ ಕಳುಹಿಸಲಾದ 8 ವರದಿಗಳು ನೆಗೆಟಿವ್ ಬಂದಿದ್ದು, ಇಂದು 24 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈವರೆಗೆ 356 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 344 ನೆಗೆಟಿವ್ ಬಂದಿವೆ. ಇಂದು 92 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,813 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 3,352 ಮಂದಿ ಇದ್ದು, 12 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ.
![Corona: No corona positive case has been registered in the district](https://etvbharatimages.akamaized.net/etvbharat/prod-images/6729672_339_6729672_1586447099060.png)
ಇಂದಿಗೆ 2,594 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.