ETV Bharat / state

ಕೊರೊನಾ ಶಂಕೆ: ಮಂಗಳೂರಲ್ಲಿ ಇಂದು‌ 89 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

author img

By

Published : May 2, 2020, 9:07 PM IST

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Corona
ಕೊರೊನಾ ಭೀತಿ: ಇಂದು‌ 89 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 89 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 396 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 356 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 355 ಕೂಡ ನೆಗೆಟಿವ್ ಬಂದಿದೆ. ಈವರೆಗೆ 2994 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 24 ಪಾಸಿಟಿವ್ ಮತ್ತು 2970 ನೆಗೆಟಿವ್ ಬಂದಿವೆ. ಇಂದು 178 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 40087 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ 40 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 60 ಮಂದಿ ಎನ್​ಐಟಿಕೆ ಕ್ವಾರಂಟೈನ್​ನಲ್ಲಿ ಇದ್ದಾರೆ. ಇಂದಿಗೆ 6073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸದ್ಯ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.