ಮಂಗಳೂರು: ಮಂಗಳೂರಿನಲ್ಲಿ ಕೊರೊನಾ ಸೋಂಕಿತೆ ಗುಣಮುಖವಾಗಿದ್ದಾರೆ.
ಬಂಟ್ವಾಳ ತಾಲೂಕಿನ ನಂದಾವರದ ಮಹಿಳೆ ಮಂಗಳೂರಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದರು. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಹಲವರಿಗೆ ಕೊರೊನಾ ದೃಢಪಟ್ಟಿದ್ದು ಅದರಲ್ಲಿ ಇವರೂ ಒಬ್ಬರಾಗಿದ್ದರು.
ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟು 138 ಮಂದಿಯ ಗಂಟಲು ದ್ರವದ ವರದಿ ನಿರೀಕ್ಷಿಸಲಾಗುತ್ತಿದೆ. ಈ ಹಿಂದೆ ಕಳುಹಿಸಲಾದ 148 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 147 ನೆಗೆಟಿವ್, 1 ಪಾಸಿಟಿವ್ ಬಂದಿದೆ. ಈವರೆಗೆ 4,487 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 34 ಪಾಸಿಟಿವ್ ಮತ್ತು 4453 ನೆಗೆಟಿವ್ ಬಂದಿದೆ.
ಇಂದು 22 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 40,727 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಎನ್ಐಟಿಕೆಯಲ್ಲಿ 22 ಮಂದಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 6,073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 15 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ನಾಲ್ವರು ಸಾವನ್ನಪ್ಪಿದ್ದು 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.