ದಕ್ಷಿಣಕನ್ನಡ: ಜಿಲ್ಲೆಯ ಉಳ್ಳಾಲ ವ್ಯಾಪ್ತಿಯಲ್ಲಿ ಒಂದೇ ದಿನ 50 ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ . ಅದರಲ್ಲೂ ಉಳ್ಳಾಲ ನಗರಸಭೆ ವ್ಯಾಪ್ತಿಯೊಂದರಲ್ಲೇ 48 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ರ್‍ಯಾಂಡಮ್ ಟೆಸ್ಟ್ ನಡೆಸಿದಾಗ ಹೆಚ್ಚಿನವರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ. ಉಳ್ಳಾಲದಲ್ಲಿ ಕೊರೊನಾ ಸೋಂಕಿತ ಮಹಿಳೆಯರಿಬ್ಬರು ಸಾವನ್ನಪ್ಪಿದ ಬಳಿಕ ಈವರೆಗೆ 160 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆದರೂ ಎಚ್ಚೆತ್ತುಕೊಳ್ಳದ ಜನತೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ. ಉಳ್ಳಾಲ ಜಂಕ್ಷನ್ನಲ್ಲಿಂದು ಕೆಲವರು ಮೀನು ಮಾರಾಟ ನಡೆಸುತ್ತಿದ್ದ ದೃಶ್ಯಗಳು ಕಂಡುಬಂತು.