ETV Bharat / state

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗೆ ಕೊರೊನಾ - beltangadi corona latest news

ಬೆಳ್ತಂಗಡಿ ಸರ್ಕಾರಿ ಆ್ಪಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆಗೆ ಸೋಂಕು ತಗುಲಿದೆ.

Corona
Corona
author img

By

Published : Jul 17, 2020, 1:43 PM IST

ಬೆಳ್ತಂಗಡಿ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮಹಿಳಾ ವೈದ್ಯಾಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆಗೆ ಸೋಂಕು ತಗುಲಿದ್ದು, ಅವರ ಪತಿ ಕೂಡ ವೈದ್ಯರಾಗಿದ್ದಾರೆ. ಅವರು ಈಗಾಗಲೇ ಕ್ವಾರಂಟೈನ್​​ನಲ್ಲಿ ಇದ್ದಾರೆ.

ಆಸ್ಪತ್ರೆಯಲ್ಲಿ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ ತೆರೆದು ಚಿಕಿತ್ಸೆ ಆರಂಭವಾದ ಬಳಿಕ ಇಲ್ಲಿ 10 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಎಲ್ಲಾ ಸೋಂಕಿತರನ್ನು ಚಿಕಿತ್ಸೆಗಾಗಿ ಉಜಿರೆ ಟಿ.ಬಿ. ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಬಾಣಂತಿಯರು ಹಾಗೂ ಕೊರೊನಾ ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೇ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಹಾಗೂ ನಾಲ್ವರು ದಾದಿಯರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.