ಬಂಟ್ವಾಳ: ಬಂಟ್ವಾಳ ತಾಲೂಕು ಪಂಚಾಯಿತಿಯ ಕನ್ಯಾನ ಕ್ಷೇತ್ರ ಪ್ರತಿನಿಧಿಸುವ ಸದಸ್ಯ ಕುಮಾರ ಭಟ್ ಬದಿಕೋಡಿ ಅವರಿಗೆ ಕೋವಿಡ್ ಸೋಂಕು ತಗಲಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರಿಗೆ ಜ್ವರ ಕಂಡುಬಂದ ಹಿನ್ನೆಲೆ ಕೋವಿಡ್ 19 ಪರೀಕ್ಷೆ ಮಾಡಿಸಲಾಗಿತ್ತು. ನಿನ್ನೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಇದರಿಂದ ಕೆಲ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ನನಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಸ್ವಯಂ ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತಾ ಕ್ರಮ ವಹಿಸಿ ಎಂದು ಮನವಿ ಮಾಡಿದ್ದಾರೆ.