ಮಂಗಳೂರು: ಕೊರೊನಾ ಭೀತಿಯ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತೀ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸುತ್ತಿದೆ. ವಿಮಾನ ನಿಲ್ದಾಣ ಆರೋಗ್ಯ ಸಂಘಟನೆಯು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ಫ್ರಾರೆಡ್ ಥರ್ಮಾ ಮೀಟರ್ ಬಳಸಿ ನೂರು ಪ್ರತಿಶತ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಲ್ಲದೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾನರ್, ಸ್ಯಾನಿಟೈಸರ್, ಕಟೌಟ್ ಗಳನ್ನು ಹಾಕಲಾಗಿದೆ.

ವಿಮಾನ ನಿಲ್ದಾಣದ ಸ್ವಚ್ಛತಾ ಸಿಬ್ಬಂದಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಎಸ್ಕಲೇಟರ್, ಕನ್ ವೈವರ್ ಬೆಲ್ಟ್, ಟ್ರೋಲಿಂಗ್, ರೈಲಿಂಗ್ ಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಅಲ್ಲದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯಂತೆ ಎಲ್ಲಾ ಸಿಬ್ಬಂದಿಗೂ ಮಾಸ್ಕ್, ಗ್ಲೌಸ್ ಹಾಗೂ ಸ್ಯಾನಿಟೈಸರ್ ನೀಡಬೇಕೆಂದು ಆದೇಶ ನೀಡಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.