ETV Bharat / state

'ಕೊರೊನಾ ಸೋಂಕಿನ ರಿಸಲ್ಟ್​ ಶೀಘ್ರದಲ್ಲಿ ನೀಡಲು ಯಂತ್ರ ಅಳವಡಿಕೆ' - mangalore latest news

ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯ ಫಲಿತಾಂಶ ವಿಳಂಬವಿಲ್ಲದೇ ದೊರೆಯಬೇಕು ಎಂಬ ಉದ್ದೇಶದಿಂದ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ 3 ನೇ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು 25 ಲಕ್ಷ ರೂ ವೆಚ್ಚದಲ್ಲಿ 3 ದಿನದ ಒಳಗಾಗಿ ಅಳವಡಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Corona test machine soon to be installed: srinivas pujari
'ಕೊರೊನಾ ಸೋಂಕಿನ ರಿಸಲ್ಟ್​ ಶೀಘ್ರದಲ್ಲಿ ನೀಡಲು ಶೀಘ್ರದಲ್ಲಿ ಯಂತ್ರ ಅಳವಡಿಕೆ'
author img

By

Published : May 1, 2021, 3:16 AM IST

ಮಂಗಳೂರು: ಕೊರೊನಾ ಸೋಂಕಿನ ಟೆಸ್ಟ್​ ರಿಸಲ್ಟ್​ ವಿಳಂಬವಾಗದಂತೆ ನೀಡಲು ನೂತನ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು 25 ಲಕ್ಷ ರೂ. ವೆಚ್ಚದಲ್ಲಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ಅಳವಡಿಸಲಾಗುವುದು ಎಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆ ನೀಡುವ ಕುರಿತು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯ ಫಲಿತಾಂಶ ವಿಳಂಬವಿಲ್ಲದೇ ದೊರೆಯಬೇಕು ಎಂಬ ಉದ್ದೇಶದಿಂದ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ 3 ನೇ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು 25 ಲಕ್ಷ ರೂ ವೆಚ್ಚದಲ್ಲಿ 3 ದಿನದ ಒಳಗಾಗಿ ಅಳವಡಿಸಲಾಗುವುದು, ಇದರಿಂದ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ಮಾಡಲು ಅನುಕೂಲವಾಗುತ್ತದೆ ಎಂದರು.

ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಬೇಕೆಂಬ ನಿಟ್ಟಿನಲ್ಲಿ ಜಾರಿಗೊಳಿಸಲಾಗಿರುವ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸಿದರೆ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ನಿನ್ನೆಯ ವಿಡಿಯೋ ಸಂವಾದದಲ್ಲಿ ತಿಳಿಸಿದ್ದು, ಅದನ್ನು ಜಿಲ್ಲೆಯಲ್ಲಿ ಕಟ್ಟಿನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.

ಕೊರೊನಾದಿಂದ ಮರಣ ಹೊಂದಿದವರ ಶವ ಸಾಗಾಣಿಕೆಗೆ ಉಚಿತ ಆಂಬುಲೆನ್ಸ್ ನೀಡುವುದರೊಂದಿಗೆ ಶವ ಸಂಸ್ಕಾರದ ವೆಚ್ಚವನ್ನು ಸಹ ಸರಕಾರವೇ ಭರಿಸಲಿದ್ದು, ಈ ಕೂಡಲೇ ತಾಲೂಕಿನ ತಹಸೀಲ್ದಾರ್​ಗಳಿಗೆ ಹಣ ಬಿಡುಗಡೆ ಮಾಡಲು ದ.ಕ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.