ETV Bharat / state

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 10 ಮಂದಿ ಪೊಲೀಸರಿಗೆ ಕೊರೊನಾ: ಶಶಿಕುಮಾರ್ ಎನ್‌‌

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 10 ಮಂದಿ ಪೊಲೀಸರಿಗೆ ಕೊರೊನಾ ತಗುಲಿದ್ದು, ಸೋಂಕಿತರಲ್ಲಿ ಇಬ್ಬರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಂ ಐಸೋಲೇಷನ್​ಗೆ ಒಳಗಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್‌‌. ಮಾಹಿತಿ ನೀಡಿದ್ದಾರೆ.

Shashikumar N
ಶಶಿಕುಮಾರ್ ಎನ್‌‌
author img

By

Published : Apr 26, 2021, 11:01 PM IST

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 10 ಮಂದಿ ಪೊಲೀಸರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್‌‌. ಮಾಹಿತಿ ನೀಡಿದ್ದಾರೆ.

ಶಶಿಕುಮಾರ್ ಎನ್‌‌ ಮಾಹಿತಿ

ನಗರದಲ್ಲಿ ಮಾತನಾಡಿದ ಅವರು, ಸೋಂಕಿತರಲ್ಲಿ ಇಬ್ಬರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಂ ಐಸೋಲೇಷನ್​ಗೆ ಒಳಗಾಗಿದ್ದಾರೆ. ಆಸ್ಪತ್ರೆಯಲ್ಲಿ ಇದ್ದವರು ಕೂಡ ಯಾವುದೇ ಸಮಸ್ಯೆಗಳಿಲ್ಲದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಮೊದಲ ಸುತ್ತಿನ ಲಸಿಕೆ ಪಡೆದವರಾಗಿದ್ದು, ಆರು ಮಂದಿ ಎರಡನೇ ಸುತ್ತಿನ ಲಸಿಕೆ ಪಡೆದವರಾಗಿದ್ದಾರೆ.

ಸೋಂಕಿತರ ಬಗ್ಗೆ ದಿನಂಪ್ರತಿ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಕರೆ ಮಾಡಿ ಆರೋಗ್ಯ ವಿಚಾರಿಸಲಾಗುತ್ತಿದೆ. ಅವರ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಾಗುತ್ತಿದೆ. ಪೊಲೀಸ್ ಕಂಟ್ರೋಲ್ ರೂಂನಿಂದ ಕೆಲವರಿಗೆ ಖುದ್ದಾಗಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇನೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.