ETV Bharat / state

ಐವನ್​​ ಡಿಸೋಜಗೆ ಸೋಂಕು: ಸ್ವಯಂ ಕ್ವಾರಂಟೈನ್​ ಆದ ಮಾಜಿ ಸಚಿವ ರೈ - Former minister Ramanath rai

ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಸ್ವಯಂ ಕ್ವಾರಂಟೈನ್​ಗೆ ಒಳಗಾದ ಮಾಜಿ ಸಚಿವ ರೈ
ಸ್ವಯಂ ಕ್ವಾರಂಟೈನ್​ಗೆ ಒಳಗಾದ ಮಾಜಿ ಸಚಿವ ರೈ
author img

By

Published : Aug 2, 2020, 8:50 PM IST

ಬಂಟ್ವಾಳ: ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಐವನ್ ಡಿಸೋಜ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವನ್ ಡಿಸೋಜ ಹಾಗೂ ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.