ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಕುರಿತು ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ಬಂದಿದ್ದರಿಂದ ಶಾಸಕ ಹರೀಶ್ ಪೂಂಜ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಅವರ ವರದಿ ಪಾಸಿಟಿವ್ ಬಂದಿದೆ.
ಮುಖ್ಯಮಂತ್ರಿ ಭೇಟಿಯ ನಂತರ ನನ್ನನ್ನು ಭೇಟಿಯಾದ ಎಲ್ಲರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿ, ಅದೇ ರೀತಿ ಯಾರೂ ಕೂಡ ಗಾಬರಿಯಾಗಬಾರದೆಂದು ತಮ್ಮ ಟ್ವೀಟ್ಟರ್ ಖಾತೆಯ ಮೂಲಕ ವಿನಂತಿಸಿಕೊಂಡಿದ್ದಾರೆ. ಶಾಸಕರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಈಗಾಗಲೇ ಅವರ ಅಭಿಮಾನಿಗಳು ಅತಂಕಕ್ಕೊಳಗಾಗಿದ್ದು, ಆದಷ್ಟೂ ಬೇಗ ಅವರು ಗುಣಮುಖವಾಗಿ ಬರಲೆಂದು ಹಾರೈಸುತ್ತಿದ್ದಾರೆ.