ETV Bharat / state

ಕೊರೊನಾ ಶಂಕೆ: ಮಂಗಳೂರಲ್ಲಿ 137 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - corona news

ಮಂಗಳೂರಿನಲ್ಲಿ ಇಂದು 137 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾದ 88 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿಯಲ್ಲಿ 86 ಜನರ ವರದಿ ನೆಗೆಟಿವ್ ಬಂದಿದ್ದು, 3 ಪಾಸಿಟಿವ್ ಬಂದಿವೆ.

ಇಎಸ್ಐ ಆಸ್ಪತ್ರೆ
ಇಎಸ್ಐ ಆಸ್ಪತ್ರೆ
author img

By

Published : May 6, 2020, 8:58 PM IST

ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು 137 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಟ್ಟು 217 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 88 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿಯಲ್ಲಿ 86 ಜನರ ವರದಿ ನೆಗೆಟಿವ್ ಬಂದಿದ್ದು, 3 ಪಾಸಿಟಿವ್ ಬಂದಿವೆ. ಈವರೆಗೆ 3,699 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 28 ಪಾಸಿಟಿವ್ ಮತ್ತು 3,671 ನೆಗೆಟಿವ್ ಬಂದಿವೆ. ಇಂದು 79 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 40,303 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಇಎಸ್ಐ ಆಸ್ಪತ್ರೆಯಲ್ಲಿ 40 ಮಂದಿ, ಎನ್​​ಐಟಿಕೆಯಲ್ಲಿ 28 ಮಂದಿ ಕ್ವಾರಂಟೈನ್​​ನಲ್ಲಿ ಇದ್ದಾರೆ. ಇಂದಿಗೆ 6,073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಸಾವನ್ನಪ್ಪಿದ್ದು, 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.