ETV Bharat / state

ಕೊರೊನಾ ಶಂಕೆ: ಮಂಗಳೂರಿನಲ್ಲಿ ಇಂದು‌ 248 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರಿನಲ್ಲಿ ಈವರೆಗೆ 2447 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 21 ಪಾಸಿಟಿವ್ ಮತ್ತು 2426 ನೆಗೆಟಿವ್ ಬಂದಿದೆ.

248 people  throat fluid sent for  test
ಕೊರೊನಾ ಭೀತಿ: ಇಂದು‌ 248 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ
author img

By

Published : Apr 29, 2020, 10:02 PM IST

ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 248 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 394 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 390 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 390 ಕೂಡಾ ನೆಗೆಟಿವ್ ಬಂದಿದೆ. ಈವರೆಗೆ 2447 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 21 ಪಾಸಿಟಿವ್ ಮತ್ತು 2426 ನೆಗೆಟಿವ್ ಬಂದಿದೆ. ಇಂದು 70 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39632 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ 40 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 59 ಮಂದಿ ಎನ್​ಐಟಿಕೆ ಕ್ವಾರಂಟೈನ್​​ನಲ್ಲಿ ಇದ್ದಾರೆ. ಇಂದಿಗೆ 6073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪ್ರಸ್ತುತ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ 7 ಮಂದಿಯಲ್ಲಿ ಬಂಟ್ವಾಳ ಕಸಬಾ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.