ETV Bharat / state

ಉಳ್ಳಾಲದಲ್ಲಿ ಗುರುವಾರ ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೊರೊನಾ ಸೋಂಕು ದೃಢ - corona news ullala

ಉಳ್ಳಾಲದಲ್ಲಿ ಗುರುವಾರ ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.

ullala
ಕೊರೊನಾ ಸೋಂಕು
author img

By

Published : Jul 2, 2020, 11:37 PM IST

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಉಳ್ಳಾಲದಲ್ಲಿ ಗುರುವಾರ ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.

ಕಳೆದ ಕೆಲ ದಿನಗಳಿಂದ ಉಳ್ಳಾಲ ಪರಿಸರದಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಗುರುವಾರ ಉಳ್ಳಾಲ ಸುತ್ತಮುತ್ತಲಿನ ಪ್ರದೇಶದಲ್ಲಿ 2 ವರ್ಷ 3 ವರ್ಷದ ಮಕ್ಕಳು ಸೇರಿ 28 ಮಂದಿಗೆ ಸೋಂಕು ಹರಡಿದೆ.

ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೊರೊನಾ ಸೋಂಕು ದೃಢ

ಸೋಂಕಿತರಲ್ಲಿ ಅನಿಲ ಕಂಪೌಂಡ್ ಉಳ್ಳಾಲದ 6 ಮತ್ತು 3 ರ ಹರೆಯದ ಬಾಲಕರು, ಮುಕ್ಕಚ್ಚೇರಿಯ 29ರ ಮಹಿಳೆ, 39 ವರ್ಷದ ಗಂಡಸು, ಆಝಾದನಗರ ಉಳ್ಳಾಲದ 44 ಹಾಗೂ 55 ರ ಗಂಡಸು, 36, 50, 30ರ ಮಹಿಳೆಯರು, 13 ಹಾಗೂ 8ರ ಬಾಲಕರು, 12 ವರ್ಷದ ಬಾಲಕಿ, 2 ವರ್ಷದ ಹರೆಯದ ಮಗು, ಉಳ್ಳಾಲ ಪಟೇಲ ಕಂಪೌಂಡಿನ 51ರ ಹರೆಯದ ಗಂಡಸು, ಹರೇಕಳ ಪಂಚಾಯತ್ ಬಳಿಯ 26 ರ ಯುವಕ, ಅಕ್ಕರೆಕೆರೆ ಉಳ್ಳಾಲದ 46 ವರ್ಷದ ಗಂಡಸು, ಮುನ್ನೂರು ಸಂತೋಷ ನಗರದ 52 ರ ಗಂಡಸು, ತೊಕ್ಕೊಟ್ಟು ಪರಿಸರದ 13ವರ್ಷದ ಬಾಲಕಿ ,ಮೇಲಂಗಡಿ ಉಳ್ಳಾಲದ 32 ವರ್ಷದ ಗಂಡಸು, ಉಳ್ಳಾಲ ಹೈದರಾಲಿ ರಸ್ತೆಯ 30 ವರ್ಷದ ಗಂಡಸು, ಮುಕ್ಕಚ್ಚೇರಿ ರಸ್ತೆಯ 48 ವರ್ಷದ ಗಂಡಸು, ಸುಲ್ತಾನ್ ನಗರ ಉಳ್ಳಾಲದ 48ವರ್ಷದ ಗಂಡಸು, ಉಳ್ಳಾಲ ಪದ್ಮಶಾಲಿ ಕಂಪೌಂಡಿನ 44 ವರ್ಷದ ಮಹಿಳೆ , ಮೊಗವೀರಪಟ್ನ ಉಳ್ಳಾಲದ 54 ವರ್ಷದ ಗಂಡಸು , ಸೋಮೇಶ್ವರ ಉಳ್ಳಾಲದ 65 ವರ್ಷದ ಗಂಡಸು, ಅನಿಲಕಂಪೌಂಡ್ ಉಳ್ಳಾಲದ 29 ವರ್ಷದ ಗಂಡಸು, ಕಲ್ಲಾಪು ತೊಕ್ಕೊಟ್ಟು ವಿನ 27 ವರ್ಷದ ಮಹಿಳೆ ಸೇರಿ ಸೋಮೇಶ್ವರ, ಮುನ್ನೂರು, ಹರೇಕಳದಲ್ಲಿ ಮೂವರು ಸೇರಿ ಒಟ್ಟು 28 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.