ETV Bharat / state

ಕೊರೊನಾ ಶಂಕೆ: ಮಂಗಳೂರಲ್ಲಿ ಇಂದು‌ 279 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - Throat fluid sent to test

ಮಂಗಳೂರಿನಲ್ಲಿ ಇಂದು 279 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾದ 126 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿಯಲ್ಲಿ 125 ನೆಗೆಟಿವ್ ಬಂದಿದ್ದು, ಒಂದು ಪಾಸಿಟಿವ್ ಬಂದಿದೆ.

ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್
ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್
author img

By

Published : Apr 30, 2020, 10:41 PM IST

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗುರುವಾರ 279 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಟ್ಟು 548 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 126 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿಯಲ್ಲಿ 125 ನೆಗೆಟಿವ್ ಬಂದಿದ್ದು, ಒಂದು ಪಾಸಿಟಿವ್ ಬಂದಿದೆ. ಈವರೆಗೆ 2,573 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 22 ಪಾಸಿಟಿವ್ ಮತ್ತು 2,551 ನೆಗೆಟಿವ್ ಬಂದಿದೆ. ಇಂದು 142 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39,774 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​​ನಲ್ಲಿದ್ದ 40 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 59 ಮಂದಿ ಎನ್​ಐಟಿಕೆ ಕ್ವಾರಂಟೈನ್​ನಲ್ಲಿ ಇದ್ದಾರೆ. ಇಂದಿಗೆ 6073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನೂ ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.