ಬಂಟ್ವಾಳ: ಕೊರೊನಾ ಸೋಂಕಿನಿಂದ ಬಂಟ್ವಾಳದ ಮಹಿಳೆ ಮೃತಪಟ್ಟ ಪ್ರಕರಣ ಸಂಬಂಧ ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಸ್ಥಳೀಯ ವೈದ್ಯರೊಬ್ಬರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರೊನಾ ಸೊಂಕಿನಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದವರು ಮೃತಪಟ್ಟಿದ್ದು, ಈ ಬಗ್ಗೆ ಬಂಟ್ವಾಳ ಆರೋಗ್ಯ ಇಲಾಖೆಗೆ ರೋಗಿಗೆ ಮೊದಲು ಚಿಕಿತ್ಸೆ ನೀಡಿದ ಸ್ಥಳೀಯ ವೈದ್ಯ ಮಾಹಿತಿ ನೀಡಿರಲಿಲ್ಲ ಎಂಬ ಆಪಾದನೆ ಮೇಲೆ ದೂರು ದಾಖಲಾಗಿದೆ.
ಮೃತರ ಪತಿ ಮತ್ತು ಮಗನನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕುವ ವೇಳೆ, ಏಪ್ರಿಲ್ 15ರಂದು ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಸ್ಥಳೀಯ ವೈದ್ಯರಲ್ಲಿಗೆ ಕರೆದುಕೊಂಡು ಹೋಗಿದ್ದಾಗಿ ತಿಳಿಸಿದ್ದಾರೆ. ಕೆಪಿಎಂಇ ಕಾಯ್ದೆ ಪ್ರಕಾರ, ಎಲ್ಲಾ ಸಾಂಕ್ರಾಮಿಕ ಖಾಯಿಲೆಗಳ ಬಗ್ಗೆ ಸಂಬಂಧಪಟ್ಟ ಆರೋಗ್ಯ ಇಲಾಖೆಗೆ ನೀಡಬೇಕು.
ವೈದ್ಯರು ನಾಲ್ಕು ದಿನಗಳ ಕಾಲ ಮೃತ ರೋಗಿಗೆ ಚಿಕಿತ್ಸೆ ನೀಡಿದ್ದಾರೆ. ರೋಗ ಉಲ್ಬಣಗೊಂಡರು ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗೆ ಶಿಫಾರಸು ಮಾಡಿರುವುದಿಲ್ಲ. ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿಸಿದ್ದಾರೆ. ಈ ಹಿನ್ನೆಲೆ ಕೋವಿಡ್ 19 ಹರಡುವಿಕೆಯಲ್ಲಿ ನಿರ್ಲಕ್ಷ್ಯತನ ವಹಿಸಿದ ಆಪಾದನೆಯಡಿ ಪ್ರಕರಣ ದಾಖಲಾಗಿದೆ.