ETV Bharat / state

ಮಂಗಳೂರಿನಲ್ಲಿ ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ - ವಿಷ ಸೇವಿಸಿ ಆತ್ಮಹತ್ಯೆ

ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ.

ಆತ್ಮಹತ್ಯೆ
author img

By

Published : Oct 13, 2019, 10:33 PM IST

ಮಂಗಳೂರು: ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ.

ಮೂಡಬಿದಿರೆ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಮೂಲದ ವಿಷ್ಣು (22) ಎಂಬ ಯುವಕ ಹಾಗೂ ಯುವತಿ ಹಲವು ದಿನಗಳಿಂದ ಪ್ರೀತಿಸುತ್ತಿದ್ದರಂತೆ. ಅಕ್ಟೋಬರ್‌ 10ರಂದು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯ ಲಾಡ್ಜ್​ ಒಂದರಲ್ಲಿ ತಂಗಿದ್ದರು. ಜಾತಿ ಬೇರೆಯಾಗಿದ್ದರಿಂದ ಮದುವೆಯಾಗಲು ಮನೆಯವರು ವಿರೋಧ ಪಡಿಸಬಹುದೆಂಬ ಕಾರಣಕ್ಕೆ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಲಾಡ್ಜ್​​ನವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಇಬ್ಬರನ್ನೂ ದಾಖಲಿಸಿದ್ದಾರೆ. ಬಳಿಕ ಇಬ್ಬರ ಮನೆಯವರೂ ಆಗಮಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಷ್ಣು ನಿನ್ನೆ ತಡರಾತ್ರಿ ಮೃತಪಟ್ಟರೆ, ಯುವತಿ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾಳೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಪ್ರೇಮಿಸುತ್ತಿದ್ದ ವಿದ್ಯಾರ್ಥಿ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ.

ಕೇರಳ ರಾಜ್ಯದ ಕಾಸರಗೋಡು ಮೂಲದ ಮೂಡುಬಿದಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಗ್ರೀಷ್ಮಾ(21) ಹಾಗೂ ವಿಷ್ಣು(22) ಮೃತಪಟ್ಟವರು.

Body:ಹಲವು ಕಾಲಗಳಿಂದ ಪ್ರೀತಿಸುತ್ತಿದ್ದ ಈ ಯುವಜೋಡಿಯು ಅಕ್ಟೋಬರ್‌ 10ರಂದು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯ ಲಾಡ್ಜೊಂದರಲ್ಲಿ ತಂಗಿದ್ದರು. ಇಬ್ಬರದ್ದೂ ಪರಸ್ಪರ ಜಾತಿ ಬೇರೆಯಾಗಿದ್ದರಿಂದ, ಮದುವೆಯಾಗಲು ಮನೆಯವರು ವಿರೋಧ ಪಡಿಸಬಹುದೆಂದು ಮನನೊಂದು ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಲಾಡ್ಜ್ ನವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಇಬ್ಬರ ಮನೆಯವರೂ ಆಗಮಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಷ್ಣು ನಿನ್ನೆ ತಡರಾತ್ರಿ 1.20 ಸುಮಾರಿಗೆ ಮೃತಪಟ್ಟರೆ, ಗ್ರೀಷ್ಮಾ ಇಂದು ಮಧ್ಯಾಹ್ನ 3.15ಕ್ಕೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.