ETV Bharat / state

ಕಾಣಿಕೆ ಡಬ್ಬಿ ಕಳ್ಳತನ ಮಾಡಿದ್ದ ಅಪರಾಧಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

ಕಾಣಿಕೆ ಡಬ್ಬಿ ಕದ್ದ ಪ್ರಕರಣದ ಅಪರಾಧಿಗೆ ಮಂಗಳೂರಿನ ಎರಡನೇ ಸಿಜೆಎಂ ನ್ಯಾಯಾಲಯವು ಒಂದು ವರ್ಷ ಕಾರಾಗೃಹ ವಾಸ ಹಾಗೂ ಎರಡು ಸಾವಿರ ರೂ. ದಂಡ ವಿಧಿಸಿ​ ಆದೇಶಿಸಿದೆ.

court-sentenced-person-in-temple-donation-box-theft-case
ಕಾಣಿಕೆ ಡಬ್ಬಿ ಕಳ್ಳತನ ಮಾಡಿದ್ದ ಅಪರಾಧಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​
author img

By

Published : Nov 23, 2022, 11:03 PM IST

ಮಂಗಳೂರು: ಹೋಟೆಲ್ ಕ್ಯಾಶ್ ಕೌಂಟರ್​​ನಲ್ಲಿ ದೈವಸ್ಥಾನಕ್ಕೆಂದು ಇಟ್ಟಿದ್ದ ಕಾಣಿಕೆ ಡಬ್ಬಿ ಕದ್ದ ಪ್ರಕರಣದ ಅಪರಾಧಿಗೆ ಒಂದು ವರ್ಷ ಕಾರಾಗೃಹ ವಾಸ ಹಾಗೂ ಎರಡು ಸಾವಿರ ರೂ. ದಂಡ ವಿಧಿಸಿ ಕೋರ್ಟ್​ ಆದೇಶಿಸಿದೆ. ಬಂಟ್ವಾಳ ತಾಲೂಕಿನ ಕುಕ್ಕಾಜೆ ಬೈಲುಮನೆ ಇರಾ ಗ್ರಾಮದ ಮೊಹಮ್ಮದ್‌ ಆಸೀಫ್ ಕುಕ್ಕಾಜೆ(28) ಶಿಕ್ಷೆಗೊಳಗಾದ ವ್ಯಕ್ತಿ.

ಮಂಗಳೂರಿನ ಎರಡನೇ ಸಿಜೆಎಂ ನ್ಯಾಯಾಲಯವು ಆಸೀಫ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದೆ. ಆಸೀಫ್ ಕುಕ್ಕಾಜೆ 2021ರ ಮಾರ್ಚ್ 15ರಂದು ನಗರದ ಕಂಕನಾಡಿಯ ಕೆ.ಆರ್. ಕಾಂಪ್ಲೆಕ್ಸ್‌ನ 1ನೇ ಮಹಡಿಯಲ್ಲಿರುವ ಐಸಿರಿ ಎಂಬ ಹೋಟೆಲ್‌ನ ಕ್ಯಾಶ್ ಕೌಂಟರ್‌ನಲ್ಲಿದ್ದ ಕಂಕನಾಡಿ ಪಡುಮಲೆ ಕಲ್ಲುರ್ಟಿ ದೈವಸ್ಥಾನಕ್ಕೆ ಎಂದು ಇಟ್ಟಿದ್ದ ಕಾಣಿಕೆ ಡಬ್ಬಿ ಕಳ್ಳತನ ಮಾಡಿದ್ದ.

ಈ ಬಗ್ಗೆ ಹೋಟೆಲ್ ಮಾಲೀಕ ನವೀನ್‌ ಅವರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು, ಆರೋಪಿ ಮಹಮ್ಮದ್ ಆಸೀಫ್ ಕುಕ್ಕಾಜೆಯಿಂದ ಕಳವು ಮಾಡಿದ ಕಾಣಿಕೆ ಡಬ್ಬಿ ಹಾಗೂ ಅದರಲ್ಲಿದ್ದ 705.50 ರೂ.ವನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​​ ಸಲ್ಲಿಸಿದ್ದರು.

ಪ್ರಕರಣದಲ್ಲಿ ಎಲ್ಲಾ ಸಾಕ್ಷಿದಾರರ ವಿಚಾರಣೆ ನಡೆಸಿ ವಾದ, ಪ್ರತಿವಾದ ಆಲಿಸಿದ ಎರಡನೇ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಮಧುಕರ ಪಿ. ಭಾಗವತ್ ಕೆ. ಅವರು ಆರೋಪಿಯು ತಪ್ಪಿತಸ್ಥನೆಂದು ನಿರ್ಣಯಿಸಿ 1 ವರ್ಷ ಜೈಲು ಶಿಕ್ಷೆ ಮತ್ತು ರೂ 2000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ 10 ದಿನಗಳ ಸಾಮಾನ್ಯ ಜೈಲು ವಾಸ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಎರಡನೇ ಆರೋಪಿ ಮಹಮ್ಮದ್ ಇಲಿಯಾಸ್ ಯಾನೆ ಅಳಿಯ ಸಾಕ್ಷ್ಯಧಾರದ ಕೊರತೆಯಿಂದ ಬಿಡುಗಡೆಯಾಗಿದ್ದಾನೆ.

ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ: ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ: ಚೇತನ್​ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.