ಮಂಗಳೂರು: ಕೋವಿಡ್ 19 ರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 9 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಹಿಂದೆ ಕಳುಹಿಸಲಾದ 17 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ಬಂದಿದ್ದು, ಯಾರಿಗೂ ಕೊರೊನಾ ಸೋಂಕು ದೃಢಪಟ್ಟಿಲ್ಲ. ಇಂದು ವಿದೇಶದಿಂದ ಬಂದಿದ್ದ 630 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈವರೆಗೆ ಒಟ್ಟು 36,951 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 1,564 ಮಂದಿ ಇದ್ದು, 14 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 10 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ.
ಜಿಲ್ಲೆಯಲ್ಲಿ 5 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುತ್ತಿದ್ದು, ಈವರೆಗೆ 1,04,151 ಮನೆಗಳಿಗೆ ಭೇಟಿ ನೀಡಿ 4,00,148 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.