ETV Bharat / state

ಸೋಂಕಿತರಿಗೆ ವರದಾನವಾದ ಧರ್ಮಸ್ಥಳದ ಆರೋಗ್ಯ ಸೇವೆ

author img

By

Published : Jun 20, 2021, 11:49 AM IST

ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆರಂಭಿಸಿದ ಕೊರೊನಾ ಆರೈಕೆ ಕೇಂದ್ರಗಳು ಸೋಂಕಿತರಲ್ಲಿ ಭಯ, ಆತಂಕ ನಿವಾರಿಸುತ್ತಿವೆ. ಸುಸಜ್ಜಿತವಾಗಿರುವ ಕೊರೊನಾ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ.

Dharmasthala
ಧರ್ಮಸ್ಥಳದ ಆರೋಗ್ಯ ಸೇವೆ

ಬೆಳ್ತಂಗಡಿ(ದ.ಕ): ಧರ್ಮಸ್ಥಳದಲ್ಲಿ ರಜತಾದ್ರಿ ವಸತಿ ಗೃಹದಲ್ಲಿರುವ ಕೊರೊನಾ ಆರೈಕೆ ಕೇಂದ್ರ 300 ಕೊಠಡಿಗಳನ್ನು ಹೊಂದಿದೆ. 600 ಹಾಸಿಗೆಗಳಿರುವ ವಸತಿಗೃಹವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೊರೊನಾ ಆರೈಕೆ ಕೇಂದ್ರಕ್ಕಾಗಿ ಉಚಿತವಾಗಿ ನೀಡಿದ್ದರು.

ನೆರಿಯಾ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕೊರೊನಾ ಸೋಂಕಿತರಾದ 120 ಪುರುಷರು ಹಾಗೂ 86 ಮಹಿಳೆಯರು ಸೇರಿದಂತೆ ಒಟ್ಟು 206 ಮಂದಿ ಧರ್ಮಸ್ಥಳದ ಕೊರೊನಾ ಆರೈಕೆ ಕೇಂದ್ರದಲ್ಲಿ ಶುಶ್ರೂಷೆ ಪಡೆದು ಸಂಪೂರ್ಣ ಗುಣಮುಖರಾಗಿ ಸೋಮವಾರ ಸಿಯೋನ್ ಆಶ್ರಮಕ್ಕೆ ಮರಳುವರು. 206 ಮಂದಿ ಸೋಂಕಿತರಲ್ಲಿ 10 ಮಂದಿ ವಿಕಲ ಚೇತನರು, 30 ಮಂದಿ ಎಪ್ಪತ್ತು ವರ್ಷಕ್ಕೂ ಮಿಕ್ಕಿದ ಹಿರಿಯ ನಾಗರಿಕರು ಹಾಗೂ ಕೆಲವರು ಬುದ್ಧಿಮಾಂದ್ಯರೂ ಇದ್ದಾರೆ.

ಕೇಂದ್ರದಲ್ಲಿರುವ ವೈದ್ಯರು, ದಾದಿಯರು, ನೌಕರರು, ಸ್ವಯಂಸೇವಕರು ಹಾಗೂ ಸಿಬ್ಬಂದಿಯ ಸೌಜನ್ಯ ಪೂರ್ಣ ಸೇವೆಯಿಂದ ಸೋಂಕಿತರಲ್ಲಿ ಭಯ ಆತಂಕ ನಿವಾರಣೆಯಾಗಿದ್ದು ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿಸಿದೆ. ಪ್ರತಿದಿನ ಬೆಳಿಗ್ಗೆ ಉಪಾಹಾರ, 11 ಗಂಟೆಗೆ ಕಷಾಯ ಮತ್ತು ಬಿಸ್ಕೆಟ್, ಮಧ್ಯಾಹ್ನ ಊಟ, ಸಂಜೆ ಕಾಫಿ, ಟೀ, ಕಷಾಯ, ತಿಂಡಿ ಹಾಗೂ ರಾತ್ರಿ ಊಟ ಮತ್ತು ಊಟ ಮಾಡದವರಿಗೆ ಉಪಹಾರವನ್ನು ಧರ್ಮಸ್ಥಳದ ವತಿಯಿಂದ ಒದಗಿಸಲಾಗಿದೆ.

ಧರ್ಮಸ್ಥಳದ ವತಿಯಿಂದ ಮೂರು ಜನ ದಾದಿಯರು, ಸಿಯೋನಾ ಆಶ್ರಮದ 10 ಮಂದಿ ದಾದಿಯರು ಕೂಡಾ ಸೇವೆ ನೀಡಿದ್ದಾರೆ. 8 ಜನ ಶಿಕ್ಷಕರೂ ಸೇವೆಯಲ್ಲಿ ನಿರತರಾಗಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣೆಯ 10 ಮಂದಿ ಸದಸ್ಯರು ದಿನದ 24 ಗಂಟೆಯೂ ಸೇವೆಯಲ್ಲಿ ನಿರತರಾಗಿದ್ದರು.

ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ, ಸಿ.ಇ.ಒ. ಕುಮಾರ್, ಕೇಂದ್ರದಲ್ಲಿ ಸ್ವಚ್ಛತೆ, ಸೇವೆ, ದಕ್ಷತೆಯೊಂದಿಗೆ ನೀಡುತ್ತಿರುವ ಸೌಜನ್ಯ ಪೂರ್ಣ ಸೇವೆಗೆ ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಾಸಕ ಹರೀಶ್ ಪೂಂಜ ಆಗಾಗ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಬೂಟ್​ ಕಾಲಿನಿಂದ ತರಕಾರಿ ಒದ್ದು ಪಿಎಸ್​ಐ ದರ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.