ಮಂಗಳೂರು: ದಿನ ಕಳೆದಂತೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರು ಕೋವಿಡ್ ತಪಾಸಣೆ ಮಾಡಿಸಿದ್ದರು. ಇಂದು ಅವರ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಪಾಲಿಕೆ ಆಯುಕ್ತರ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.