ಬಂಟ್ವಾಳ : ಗೋಹತ್ಯೆ ನಿಷೇಧ ಕಾಯ್ದೆ ಸಹಿತ ಬಿಜೆಪಿ ಸರ್ಕಾರ ಹಲವು ಸಾಮಾಜಿಕವಾಗಿ ದುಷ್ಪರಿಣಾಮ ಬೀರುವ ಕಾನೂನುಗಳನ್ನು ರೂಪಿಸುತ್ತಿದೆ. ಅವುಗಳ ವಿರುದ್ಧ ಹೋರಾಟವನ್ನು ಸಶಕ್ತವಾಗಿ ಕಾಂಗ್ರೆಸ್ ನೇತೃತ್ವದಲ್ಲಿ ರೂಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ನಡೆದ ಮೈಸೂರು ವಿಭಾಗೀಯ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಬಾರಿ ಪಕ್ಷ ಅಧಿಕಾರಕ್ಕೆ ಬರಲು ಗ್ರಾಮಮಟ್ಟದಲ್ಲಿ ಸಂಘಟನೆ, ಹೋರಾಟಗಳಿಗೆ ಯೋಜನೆ ರೂಪಿಸಬೇಕು.
ಐದು ವರ್ಷಗಳ ತನ್ನ ಅವಧಿಯ ಸರ್ಕಾರ ರೂಪಿಸಿದ ಯೋಜನೆ, ಕೇಂದ್ರದಲ್ಲಿ ಯುಪಿಎ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಜನರಿಗೆ ವಿವರಿಸುವಲ್ಲಿ ನಾವು ಯಾಕೆ ಎಡವಿದ್ದೇವೆ ಎಂಬುದನ್ನು ಅರಿತುಕೊಳ್ಳಬೇಕು.
ದಕ್ಷಿಣ ಕನ್ನಡ ಜಿಲ್ಲೆಯು ಕೋಮುವಾದದ ಪ್ರಯೋಗಶಾಲೆ ಎಂಬ ಹಿನ್ನೆಲೆ ಅದನ್ನು ತೊಡೆದು ಹಾಕುವ ಉದ್ದೇಶದಿಂದ ಇಲ್ಲಿ ಸಮಾವೇಶ ಮಾಡಲಾಗಿದೆ. ಬಿಜೆಪಿ 7 ಕಾಂಗ್ರೆಸ್ 1 ಸ್ಥಾನ ಗಳಿಸಿದೆ. ಮುಂದಿನ ಬಾರಿ ಕಾಂಗ್ರೆಸ್ ಎಲ್ಲ ಸ್ಥಾನಗಳನ್ನು ಗಳಿಸಬೇಕು ಎಂದು ಪ್ರತಿನಿಧಿಗಳಿಗೆ ಉತ್ಸಾಹ ತುಂಬಿದ್ದಾರೆ.