ETV Bharat / state

ಕೇಂದ್ರ ಸರಕಾರದ ಫ್ಯಾಸಿಸ್ಟ್ ಮನೋಭಾವ ಖಂಡಿಸಿ ಮಂಗಳೂರಲ್ಲಿ ಪ್ರತಿಭಟನೆ

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ, ನರೇಂದ್ರ ಮೋದಿ ಸರಕಾರ ಪ್ರಜಾಪ್ರಭುತ್ವ, ಜಾತ್ಯತೀತ ಶಕ್ತಿಗಳನ್ನು ಕುಗ್ಗಿಸುವ ಉದ್ದೇಶದಿಂದ ದೆಹಲಿಯಲ್ಲಿ ನಡೆದ ಈ ಹೋರಾಟಕ್ಕೆ ಕೋಮು ಲೇಪನ ಹಚ್ಚಿ ಹಲವಾರು ಮುಖಂಡರ ಮೇಲೆ ಎಫ್ಐಆರ್ ದಾಖಲಿಸಿ, ಜೈಲಿಗೆ ಕಳುಹಿಸುವ ಹುನ್ನಾರ ನಡೆಸುತ್ತಿದೆ ಎಂದು ಹೇಳಿದರು.

author img

By

Published : Sep 22, 2020, 7:33 PM IST

CPIM protest in Manglore
ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ದೆಹಲಿ ಗಲಭೆ ನೆಪದಲ್ಲಿ ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಂ.ಸೀತಾರಾಂ ಯೆಚೂರಿ ಹಾಗೂ ಮತ್ತಿತರರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿರುವ ಕೇಂದ್ರ ಸರಕಾರದ ಫ್ಯಾಸಿಸ್ಟ್ ಮನೋಭಾವ ಖಂಡಿಸಿ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಸಮಿತಿಯ ಸದಸ್ಯರಿಂದ ನಗರದ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ, ನರೇಂದ್ರ ಮೋದಿ ಸರಕಾರ ಪ್ರಜಾಪ್ರಭುತ್ವ, ಜಾತ್ಯತೀತ ಶಕ್ತಿಗಳನ್ನು ಕುಗ್ಗಿಸುವ ಉದ್ದೇಶದಿಂದ ದೆಹಲಿಯಲ್ಲಿ ನಡೆದ ಈ ಹೋರಾಟಕ್ಕೆ ಕೋಮು ಲೇಪನ ಹಚ್ಚಿ ಹಲವಾರು ಮುಖಂಡರ ಮೇಲೆ ಎಫ್ಐಆರ್ ದಾಖಲಿಸಿ, ಜೈಲಿಗೆ ಕಳುಹಿಸುವ ಹುನ್ನಾರ ನಡೆಸುತ್ತಿದೆ ಎಂದು ಹೇಳಿದರು.

ಮಂಗಳೂರಿನಲ್ಲಿ ಪ್ರತಿಭಟನೆ
ದೇಶದ ಪ್ರಜಾಪ್ರಭುತ್ವ ಹೋರಾಟದ ಆಶಾ ಕಿರಣವಾಗಿರುವ ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಂ.ಸೀತಾರಾಂ ಯೆಚೂರಿ ಅವರ ಮೇಲೆ ನೋಟಿಸ್ ಜಾರಿ ಮಾಡಿ ಅವರ ಮೇಲೂ ಎಫ್ಐಆರ್ ದಾಖಲಿಸಲಾಗಿದೆ. ಈ ಮೂಲಕ ನರೇಂದ್ರ ಮೋದಿ ಸರಕಾರ ಯಾವ ದಿಕ್ಕಿನತ್ತ ನಡೆಯುತ್ತಿದೆ ಎಂದು ದೇಶದ ಜನರು ಆಲೋಚಿಸಬೇಕಾಗಿದೆ. ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು ಪ್ರಯತ್ನಿಸಿರುವ ಸಂಸದರುಗಳಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಅನಂತ್ ಕುಮಾರ್ ಹೆಗ್ಗಡೆಯವರ ಬಗ್ಗೆ ಯಾವ ಕ್ರಮವನ್ನು ಕೇಂದ್ರ ಸರಕಾರ ಕೈಗೊಂಡಿಲ್ಲ. ಕಾರ್ಮಿಕರು, ರೈತರ ಪರವಾಗಿ ಯಾರು ಮಾತನಾಡುತ್ತಾರೋ ಅಂತಹವರನ್ನು ಹುಡುಕಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಆದ್ದರಿಂದ ಕೇಂದ್ರ ಸರಕಾರದ ಇಂತಹ ಕುಕೃತ್ಯಗಳನ್ನು ಈ ದೇಶದ ಜನರು ಕ್ಷಮಿಸಲು ಸಾಧ್ಯವಿಲ್ಲ. ಆದ್ದರಿಂದ ಈ ದೇಶದ ಪ್ರಜಾಪ್ರಭುತ್ವ, ಜಾತ್ಯತೀತ ಶಕ್ತಿಗಳು ಖಂಡಿತವಾಗಿಯೂ ಒಗ್ಗಟ್ಟಾಗಿ ಹೋರಾಟದ ಮೂಲಕ ಇದನ್ನು ಹೋಲಿಸಲಾಗುತ್ತದೆ ಎಂದು ಬಾಲಕೃಷ್ಣ ಹೇಳಿದರು.

ಈ ಸಂದರ್ಭ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಐಎಂ ಜಿಲ್ಲಾ ನಾಯಕರಾದ ಸಂತೋಷ್ ಬಜಾಲ್, ಜಯಂತಿ ಬಿ.ಶೆಟ್ಟಿ, ಬಶೀರ್ ಪಂಜಿ ಮೊಗರು, ನವೀನ್ ಕೊಂಚಾಡಿ, ದಿನೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.