ETV Bharat / state

ಮನೆ ಖರೀದಿಸಿ ಗೃಹ ಪ್ರವೇಶ ಮಾಡಿದ ಯುವತಿ.. ಐದೇ ದಿನದಲ್ಲಿ ಆತ್ಮಹತ್ಯೆಗೆ ಶರಣು - 24 page death note

ಐದು ದಿನದ ಹಿಂದೆಯಷ್ಟೇ ಗೃಹ ಪ್ರವೇಶ ಮಾಡಿದ್ದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ
ಆತ್ಮಹತ್ಯೆ
author img

By

Published : Jun 8, 2023, 11:59 AM IST

Updated : Jun 8, 2023, 12:15 PM IST

ಉಳ್ಳಾಲ(ದಕ್ಷಿಣ ಕನ್ನಡ): ಅವರದ್ದು ಚಿಕ್ಕ ಕುಟುಂಬ. ತಾಯಿ ಮಗಳು ಮತ್ತು ಸಂಬಂಧಿಕರ ಇಬ್ಬರು ಮಕ್ಕಳು ಒಟ್ಟಿಗೆ ಇದ್ದರು. ಮಗಳಿಗೆ ವಿದೇಶದಲ್ಲಿ ಕೆಲಸ ಇತ್ತು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಮಗಳು ಅಶ್ವಿನಿ ನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದರು. ಹೀಗಾಗಿ ತಮ್ಮ ಕುಟುಂಬಕ್ಕೊಂದು ಸೂರು ಬೇಕೆಂದು ಹೊಸದೊಂದು ಮನೆಯನ್ನು ಖರೀದಿಸಿಯೂ ಆಗಿತ್ತು. ಇತ್ತೀಚೆಗಷ್ಟೇ ಗೃಹ ಪ್ರವೇಶ ಸಮಾರಂಭ ಅದ್ಧೂರಿಯಾಗಿ ಜರುಗಿತ್ತು. ಇದಕ್ಕಾಗಿ ಮನೆಗೆ ಕಟ್ಟಿದ್ದ ಹೂವಿನ ಮಾಲೆ, ತಳಿರು ತೋರಣಗಳು ಇನ್ನೂ ಹಾಗೆ ಇವೆ. ಇಷ್ಟರಲ್ಲಿ ನಡೆಯಬಾರದ ದುರಂತವೊಂದು ಈ ಮನೆಯಲ್ಲಿ ನಡೆದುಹೋಗಿದೆ.

ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ.. ಯುವತಿ ಅಶ್ವಿನಿ 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆ ಖರೀದಿಸಿ ಅದ್ಧೂರಿ ಗೃಹ ಪ್ರವೇಶ ಮಾಡಿದ ಐದೇ ದಿನಗಳಲ್ಲೇ ಅದೇ ಮನೆ ಕೋಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೆ ಶರಣಾಗಿರುವ ಯುವತಿ.

ರಾತ್ರಿ ಸ್ನೇಹಿತೆಯೊಂದಿಗೆ ಚಾಟ್​ ಮಾಡಿದ್ದ ಅಶ್ವಿನಿ ಬೆಳಗ್ಗೆ ಶವವಾಗಿ ಪತ್ತೆ.. ಬುಧವಾರ ರಾತ್ರಿ ಅಶ್ವಿನಿ ಅವರು ತಮ್ಮ ಸ್ನೇಹಿತೆ ಜೊತೆ ಚಾಟ್ ಮಾಡಿದ್ದರು ಎನ್ನಲಾಗಿದ್ದು, ಸ್ನೇಹಿತೆ ಬೆಳಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ.

ಇತ್ತೀಚೆಗಷ್ಟೇ ವಿದೇಶದಿಂದ ಊರಿಗೆ ಬಂದಿದ್ದ ಯುವತಿ.. ಅಶ್ವಿನಿ ಸಾಮಾನ್ಯ ಕುಟುಂಬದವರಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಅವರು ಮನೆಯೊಂದನ್ನು ಖರೀದಿಸಿದ್ದರು. ಜೂನ್​ 3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು.

ತನ್ನ ಬಳಿಯಿದ್ದ ಐಫೋನ್​ ಪ್ರಿಯಕರನಿಗೆ ಕೊಡುವಂತೆ ಉಲ್ಲೇಖ.. ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನು ಆತನಿಗೆ ನೀಡಬೇಕೆಂದು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಗಿಲು ಮುಟ್ಟಿದ ತಾಯಿಯ ಆಕ್ರಂದನ.. ಅಶ್ವಿನಿಯ ತಾಯಿ ಮಗಳನ್ನು ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು. ಹಲವು ಸಂಕಷ್ಟಗಳಿಂದ ನೊಂದಿದ್ದರೆನ್ನಲಾದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ತಮಿಳುನಾಡು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

Last Updated : Jun 8, 2023, 12:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.