ETV Bharat / state

11 ವರ್ಷಗಳ ನಂತರ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಜೈಲು ಶಿಕ್ಷೆ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಪುತ್ತೂರು 2ನೇ ಎಸಿಜೆ ಮತ್ತು ಜೆಎಮ್​ಎಫ್​ಸಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಜೈಲು ಶಿಕ್ಷೆ

author img

By

Published : Aug 1, 2023, 4:18 PM IST

Updated : Aug 1, 2023, 4:56 PM IST

ಕಡಬ (ದಕ್ಷಿಣ ಕನ್ನಡ) : ಸುಮಾರು ಹನ್ನೊಂದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಕಡಬ ತಾಲೂಕಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. 2012 ರಲ್ಲಿ ಕಡಬ ತಾಲೂಕಿನ ಗ್ರಾಮವೊಂದರ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧಿತನಾಗಿದ್ದು, ಬಳಿಕ ಈತ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.

ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆರೋಪಿ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಹೀಗಾಗಿ ನಾಲ್ಕು ತಿಂಗಳ ಹಿಂದೆ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆ ನಂತರ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು 2ನೇ ಎಸಿಜೆ ಮತ್ತು ಜೆಎಮ್​ಎಫ್​ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಅವರು ಆರೋಪಿಗೆ ಮೂರು ವರ್ಷ ಆರು ತಿಂಗಳು ಕಾರಾಗೃಹವಾಸ ಮತ್ತು 1500 ರೂ. ದಂಡ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ಅವರು ವಾದಿಸಿದ್ದರು.

ಅಪ್ತಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ಅಪ್ತಾಪ್ತೆ ಮೇಲೆ ಬೇರೆ ಬೇರೆ ಸಂದರ್ಭದಲ್ಲಿ ಯುವಕರು ಲೈಂಗಿಕ ದೌರ್ಜನ್ಯ ವೆಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಕೇರಳದ ಕೆಲವು ಯುವಕರು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕಿ ಮನೆಗೆ ಬರುವಾಗ ತಡವಾದ ಕುರಿತು ವಿಚಾರಿಸಿದಾಗ ಆಕೆ ನಡೆದ ಘಟನೆ ಬಗ್ಗೆ ವಿಚಾರ ತಿಳಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದ್ನನೂ ಓದಿ : Teacher gets life term: ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ: ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ಕಿರುಕುಳ; ಅಪರಾಧಿಗೆ 2 ವರ್ಷ ಜೈಲು ಶಿಕ್ಷೆ: ಕೊಳ್ಳೇಗಾಲದ ಭೀಮನಗರ ನಿವಾಸಿ ಶಿವಕುಮಾರ್ ಎಂಬಾತನಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ ಹಾಗು 2 ಲಕ್ಷ ರೂ ಪರಿಹಾರ ನೀಡಲು ಚಾಮರಾಜನಗರದ ಮಕ್ಕಳಸ್ನೇಹಿ ನ್ಯಾಯಾಲಯವು ಆದೇಶಿಸಿತ್ತು. 2021 ರ ಜನವರಿ 1ರಂದು ಪೊಲೀಸ್​ ಠಾಣೆಯಲ್ಲಿ ಅಪರಾಧಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ದೂರಿನಲ್ಲಿ, ಅಪರಾಧಿಯು ಬಾಲಕಿಯನ್ನು ಹಿಡಿದು ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ಪ್ರಶ್ನಿಸಿದ ಬಾಲಕಿಯ ಪಾಲಕರಿಗೂ ಕೊಲೆ ಬೆದರಿಕೆ ಹಾಕಿದ್ದನು ಎಂದು ಉಲ್ಲೇಖಿಸಲಾಗಿತ್ತು. ಇದೀಗ ನ್ಯಾಯಾಲಯದಲ್ಲಿ ಅಪರಾಧಿ ವಿರುದ್ಧ ಎಲ್ಲ ಆರೋಪಗಳು ಸಾಬೀತಾಗಿದ್ದರಿಂದ ಜೂನ್​ ತಿಂಗಳಿನಲ್ಲಿ ಶಿಕ್ಷೆ ನೀಡಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ : Bidar crime: ಪುಟ್ಟ ಮಗಳ ಮೇಲೆ ತಂದೆಯಿಂದ ಅತ್ಯಾಚಾರ; ಪ್ರಕರಣ ದಾಖಲು

Last Updated : Aug 1, 2023, 4:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.