ಬಂಟ್ವಾಳ: ರೈತರ ಬೆಳೆ ಸಮೀಕ್ಷೆ ಮಾಡುವ ಆ್ಯಪ್ನ್ನು ತಾಲೂಕು ಮಟ್ಟದಲ್ಲಿ ಅಧಿಕೃತವಾಗಿ ಇಂದು ತಾಲೂಕಿನ ಸಜೀಪ ಮೂಡ ಗ್ರಾಮದ ಪ್ರಗತಿಪರ ಕೃಷಿಕ ಗಣಪತಿ ಭಟ್ ಅವರ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಈ ಆ್ಯಪ್ ಪೂರಕವಾಗಿದೆ. ಅವರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದರು.
ಇದೇ ಸಂದರ್ಭದಲ್ಲಿ ಮೊಬೈಲ್ ಆ್ಯಪ್ ಕರಪತ್ರ ಬಿಡುಗಡೆಗೊಳಿಸಲಾಯಿತು. ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಾಯಿತು.
ನಂತರ ಅಡಕೆ ಮರ ಹತ್ತುವ ಯಂತ್ರದ ಪ್ರಾತ್ಯಕ್ಷಿಕೆಯನ್ನು ಗಮನಿಸಿದ ಸಚಿವರು, ಅದರ ಮಾಹಿತಿಯನ್ನು ಪಡೆದರು. ಯಂತ್ರಕ್ಕೆ ಸಹಾಯಧನ ಒದಗಿಸುವ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದರು.ಶಾಸಕ ರಾಜೇಶ್ ನಾಯ್ಕ್ ಹಾಗೂ ಕಾರ್ಯಕರ್ತರು, ರೈತರು ಪಾಲ್ಗೊಂಡಿದ್ದರು.