ETV Bharat / state

ಅಪ್ರಾಪ್ತೆ ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಅಪರಾಧಿಗೆ 10 ವರ್ಷ ಜೈಲು

author img

By

Published : Sep 30, 2021, 11:48 PM IST

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಗರ್ಭಿಣಿಯಾಗಿದ್ದ ಅಪರಾಧಿ ಶಿವಮೊಗ್ಗ ಮೂಲದ ರಾಜು ಯಾನೆ ರಾಜಗೆ ಮಂಗಳೂರಿನ ಹೆಚ್ಚುವರಿ ಸತ್ರ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

accused-get-10-year-imprisonment-for-rape-of-minor
ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ

ಮಂಗಳೂರು: ಅಪ್ರಾಪ್ತೆಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಶಿವಮೊಗ್ಗ ಮೂಲದ ರಾಜು ಯಾನೆ ರಾಜ (36) ಗೆ ಮಂಗಳೂರಿನ ಹೆಚ್ಚುವರಿ ಸತ್ರ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ಮತ್ತು 16 ಸಾವಿರ ರೂ.ದಂಡ ವಿಧಿಸಿ ಆದೇಶಿಸಿದೆ.

ಶಿವಮೊಗ್ಗ ನಿವಾಸಿಯಾದ ಸಂತ್ರಸ್ತ ಬಾಲಕಿಯನ್ನು ಅತ್ಯಾಚಾರಗೈದ ಅಪರಾಧಿ ರಾಜು ಆಕೆಯ ಸಂಬಂಧಿಕನೇ ಆಗಿದ್ದಾನೆ. 2015 ರಲ್ಲಿ ಶಿವಮೊಗ್ಗದಿಂದ ಮಂಗಳೂರಿಗೆ ಬಂದಿರುವ ಸಂತ್ರಸ್ತ ಬಾಲಕಿಯ ಕುಟುಂಬದೊಂದಿಗೆ ಆರೋಪಿ ಬಿಕರ್ನಕಟ್ಟೆ, ಕೈಕಂಬದ ಬಳಿ‌ ಒಂದೇ ಮನೆಯಲ್ಲಿ ವಾಸವಾಗಿದ್ದ. 2015ರ ಸೆಪ್ಟೆಂಬರ್‌ನಲ್ಲಿ ಬಾಲಕಿಯ ತಾಯಿ ಕೂಲಿ ಕೆಲಸಕ್ಕೆ ಹಾಗೂ ಹಿರಿಯ ಸಹೋದರಿ ಶಾಲೆಗೆ ಹೋಗಿದ್ದರು.

ಈ ಸಂದರ್ಭ ಸಂತ್ರಸ್ತ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದದ್ದನ್ನು ನೋಡಿ ಆರೋಪಿ ರಾಜು ಆಕೆಯ ಮೇಲೆ ಬಲವಂತದಿಂದ ಅತ್ಯಾಚಾರ ಮಾಡಿದ್ದನು. ಆ ಬಳಿಕವೂ ಆತ ಪದೇ ಪದೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.

2015ರ ಡಿಸೆಂಬರ್‌ನಲ್ಲಿ ಆಕೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪರಿಣಾಮ ಆಕೆ ಗರ್ಭಿಣಿ ಆಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಈ ಮಧ್ಯೆ ಬಾಲಕಿಗೆ ಗರ್ಭ ಪಾತವಾಗಿತ್ತು. ಆದರೆ, ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತ ಬಾಲಕಿ ಗರ್ಭಿಣಿಯಾಗಲು ಆರೋಪಿ ರಾಜುವೇ ಕಾರಣ ಎಂದು ಸಾಬೀತಾಗಿತ್ತು. ಪ್ರಕರಣದ ತನಿಖೆ ನಡೆಸಿರುವ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ಕಲಾವತಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅವರು 10 ಮಂದಿ ಸಾಕ್ಷಿದಾರರನ್ನು ವಿಚಾರಣೆಗೆ ಒಳ ಪಡಿಸಿದ್ದರು. 17 ದಾಖಲೆಗಳನ್ನು ಪರಿಶೀಲನೆ ನಡೆಸಿ, ಆರೋಪಿ ರಾಜು ಮೇಲಿನ ಆರೋಪ ಸಾಬೀತಾಗಿದೆ ಎಂದು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದ್ದಾರೆ‌‌.

ಅಪರಾಧಿ ವಿರುದ್ಧ ಐಪಿಸಿ 376 (ಅತ್ಯಾಚಾರ) ರ ಅನ್ವಯ 7 ವರ್ಷ ಕಠಿಣ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಮತ್ತೆ 1 ವರ್ಷ ಕಠಿಣ ಶಿಕ್ಷೆ, ಐಪಿಸಿ 506 (ಕೊಲೆ ಬೆದರಿಕೆ) ಅನ್ವಯ 1 ವರ್ಷ ಕಠಿಣ ಸಜೆ ಮತ್ತು 1 ಸಾವಿರ ರೂ. ದಂಡ ಹಾಕಲಾಗುತ್ತದೆ.

ಪೊಕ್ಸೊ ಕಾಯ್ದೆಯ ಸೆಕ್ಷನ್ 6 ರನ್ವಯ 10 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ದಂಡ ತೆರಲು ತಪ್ಪಿದರೆ ಮತ್ತೆ 2 ತಿಂಗಳ ಕಠಿಣ ಶಿಕ್ಷೆ ಅನುಭವಿಸಬೇಕು. ಅಲ್ಲದೆ ಸಂತ್ರಸ್ತ ಬಾಲಕಿಗೆ ಸರ್ಕಾರದಿಂದ 3 ಲಕ್ಷ ರೂ. ಪರಿಹಾರವನ್ನು ಒದಗಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

ಓದಿ: ಮಂಡ್ಯದಲ್ಲಿ ದಾಯಾದಿ ಜಗಳ: ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.