ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 24.96 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 30 ರಂದು ಮಹಿಳೆಯೊಬ್ಬರಿಂದ 143.80 ಮತ್ತು 32.30 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ಅಕ್ಟೋಬರ್ 3 ರಂದು ಪ್ರಯಾಣಿಕರೊಬ್ಬರಿಂದ ಪೇಸ್ಟ್ ರೂಪದಲ್ಲಿದ್ದ 493.76 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಒಟ್ಟು ಚಿನ್ನದ ಮೌಲ್ಯ 24.96 ಲಕ್ಷ ರೂ ಆಗಿದೆ.
ಮೂವರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡ ಸೀಮಾ ಸುಂಕ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.