ETV Bharat / state

15ನೇ ಕೊಲೆ ಪ್ರಕರಣದಲ್ಲೂ ಸರಣಿ ಹಂತಕ ಸೈನೈಡ್​​​ ಮೋಹನ್​ಗೆ ಜೀವಾವಧಿ ಶಿಕ್ಷೆ - life imprisonment

ಯುವತಿಯರ ಸರಣಿ ಹಂತಕ, ಸೈನೆಡ್ ಮೋಹನ್ ಕುಮಾರ್ ವಿರುದ್ಧದ 15ನೇ ಕೊಲೆ ಪ್ರಕರಣದ ಆರೋಪ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸೈನೈಡ್ ಮೋಹನ್​ಗೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ
author img

By

Published : Jul 18, 2019, 11:05 PM IST

ಮಂಗಳೂರು: ಯುವತಿಯರ ಸರಣಿ ಹಂತಕ, ಸೈನೆಡ್ ಮೋಹನ್ ಕುಮಾರ್ ವಿರುದ್ಧದ 15ನೇ ಕೊಲೆ ಪ್ರಕರಣದ ಆರೋಪ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ವಿವರ: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಗ್ರಾಮವೊಂದರ 26 ವರ್ಷದ ಯುವತಿಯನ್ನು ಸೈನೆಡ್ ಮೋಹನ್, ತನ್ನ ಹೆಸರು ಸುಧಾಕರ ಎಂದು ಸುಳ್ಳು ಹೇಳಿ ಪರಿಚಯ ಮಾಡಿಕೊಂಡಿದ್ದ. ವಿಮಾ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಯುವತಿಯನ್ನು ನಂಬಿಸಿದ್ದ. ಗ್ರಾಮದ ಮನೆಯೊಂದರಲ್ಲಿ ಕೆಲಸಕ್ಕೆ ಇದ್ದ ಈ ಯುವತಿಯನ್ನು 2006ರ ಜೂನ್ 20ರಂದು ಮಂಗಳೂರಿಗೆ ಕರೆಸಿಕೊಂಡಿದ್ದ. ವಿವಾಹಕ್ಕೆ ಗಂಡು ನೋಡುವ ಉದ್ದೇಶದಿಂದ ಆಕೆಯ ಅತ್ತೆ ಕೂಡ ಜೊತೆಗೆ
ಮಂಗಳೂರಿಗೆ ಬಂದಿದ್ದರು. ಮಂಗಳೂರಿನ ಸ್ಟೇಟ್‌ ಬ್ಯಾಂಕ್‌ನಲ್ಲಿ ಈ ಮೂರು ಮಂದಿ ಭೇಟಿಯಾಗಿ ವಿವಾಹದ ಬಗ್ಗೆ ಮಾತುಕತೆ ನಡೆಸಿದ್ದರು. ಬಳಿಕ ಯುವತಿಯ ಜೊತೆಗೆ ಸುಧಾಕರ್​ ಬಸ್‌ ಹತ್ತಿ ಹೋಗಿರುವುದನ್ನು ಆಕೆಯ ಅತ್ತೆ ನೋಡಿದ್ದರು. ಆದರೆ ಬಳಿಕ ಅವರು ಎಲ್ಲಿಗೆ ಹೋಗಿದ್ದರು ಎನ್ನುವುದು ತಿಳಿದಿರಲಿಲ್ಲ.

ಸೈನೈಡ್ ಮೋಹನ್​ಗೆ ಜೀವಾವಧಿ ಶಿಕ್ಷೆ
ಅಂದು ಮೋಹನ್ ಕುಮಾರ್, ಯುವತಿಯನ್ನು ನೇರವಾಗಿ ಮಡಿಕೇರಿಗೆ ಕರೆದುಕೊಂಡ ಹೋಗಿ ಅಲ್ಲಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದ. ಮರು ದಿನ ಆಕೆಯನ್ನು ಅತ್ಯಾಚಾರಗೈದು ಸೈನೆಡ್ ನೀಡಿ ಕೊಲೆ ಮಾಡಿದ್ದ. ಕೊಲೆಯಾದ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನಾಭರಣವನ್ನು ಮೋಹನ್​​ ಕುಮಾರ್ ದೋಚಿ ಮಂಗಳೂರಿನ ಫೈನಾನ್ಸ್‌ವೊಂದರಲ್ಲಿ ಅಡವಿಟ್ಟಿದ್ದ. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಮೋಹನ್​ನನ್ನು 2009ರ ಅಕ್ಟೋಬರ್ 21ರಂದು ಬಂಟ್ವಾಳದಲ್ಲಿ ಬಂಧಿಸಿದ್ದರು. ವಿಚಾರಣೆಯಲ್ಲಿ ಮೋಹನ್ ಸೈನೆಡ್ ನೀಡಿ ಯುವತಿಯರನ್ನು ಕೊಲೆ ಮಾಡಿರುವುದನ್ನು ಬಾಯಿಬಿಟ್ಟಿದ್ದ. ಈ ವೇಳೆ ಮಂಜೇಶ್ವರದ ಯುವತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಪೊಲೀಸರು ಮೋಹನ್​ ಕುಮಾರ್‌ನನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದರು.
ಮೋಹನ್​ ಕುಮಾರ್​​ನನ್ನು ಮೃತ ಯುವತಿಯ ಅತ್ತೆ ‘ಈತನೇ ಸುಧಾಕರ’ ಎಂದು ಗುರುತು ಹಿಡಿದಿದ್ದರು. ಅಲ್ಲದೆ, ಮೋಹನ್​ ಕುಮಾರ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ಸಾಕ್ಷಿಯನ್ನು ಕೂಡ ತನಿಖೆಗೆ ಬಳಸಿಕೊಳ್ಳಲಾಗಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿ 41 ಸಾಕ್ಷಿ, 50 ದಾಖಲೆ ಹಾಗೂ 42 ಸೊತ್ತುಗಳನ್ನು ಪರಿಶೀಲನೆ ನಡೆಸಲಾಗಿದ್ದು, ಮೋಹನ್‌ ಕುಮಾರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರುವ ಆರೋಪಿ ಮೋಹನ್​​ ಕುಮಾರ್‌ಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈಯೀದುನ್ನೀಸಾ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆ ನೀಡಿದರು. ಆರೋಪಿ ಮೋಹನ್ ಕುಮಾರ್ ವಿರುದ್ಧ 20 ಕೇಸುಗಳು ದಾಖಲಾಗಿದ್ದು, ಈ ಪೈಕಿ 15 ಕೇಸುಗಳಲ್ಲಿ 10ಕ್ಕೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಐದು ಕೇಸುಗಳು ವಜಾಗೊಂಡಿದ್ದು, ಇನ್ನು ಐದು ಕೇಸುಗಳು ವಿಚಾರಣೆಗೆ ಬಾಕಿ ಇವೆ. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕಿ ಜುಡಿತ್ ಒ.ಎಂ. ಕ್ರಾಸ್ತಾ ವಾದಿಸಿದ್ದರು.

Intro:ಮಂಗಳೂರು: ಯುವತಿಯರ ಸರಣಿ ಹಂತಕ, ಸೈನೆಡ್ ಮೋಹನ್ ಕುಮಾರ್ ವಿರುದ್ಧದ 15ನೇ ಯುವತಿಯ ಕೊಲೆ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ ಜೀವನಪರ್ಯಂತ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಪ್ರಕರಣ ವಿವರ: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ 26 ವರ್ಷದ ಯುವತಿಯನ್ನು ಸೈನೆಡ್ ಮೋಹನ್, ತನ್ನ ಹೆಸರು ಸುಧಾಕರ ಎಂದು ಹೇಳಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡಿದ್ದ. ವಿಮಾ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಯುವತಿಯನ್ನು ನಂಬಿಸಿದ್ದ. ಪೈವಳಿಕೆಯ ಮನೆಯೊಂದರಲ್ಲಿ ಕೆಲಸಕ್ಕೆ ಇದ್ದ ಈ ಯುವತಿಯನ್ನು 2006ರ ಜೂನ್ 20ರಂದು ಮಂಗಳೂರಿಗೆ ಕರೆಸಿಕೊಂಡಿದ್ದ. ವಿವಾಹಕ್ಕೆ ಗಂಡು ನೋಡುವ ಉದ್ದೇಶದಿಂದ ಆಕೆಯ ಜೊತೆಗೆ
ಅತ್ತೆ ಕೂಡ ಮಂಗಳೂರಿಗೆ ಬಂದಿದ್ದರು. ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಲ್ಲಿ ಈ ಮೂರು ಮಂದಿ ಭೇಟಿಯಾಗಿ ವಿವಾಹದ ಬಗ್ಗೆ ಮಾತುಕತೆ ನಡೆಸಿದ್ದರು. ಬಳಿಕ ಯುವತಿಯ ಜೊತೆಗೆ ಸುಧಾಕರ ಬಸ್‌ ಹತ್ತಿ ಹೋಗಿರುವುದನ್ನು ಆಕೆಯ ಅತ್ತೆ ನೋಡಿದ್ದರು. ಆದರೆ ಬಳಿಕ ಅವರು ಎಲ್ಲಿಗೆ ಹೋಗಿದ್ದರು ಎನ್ನುವುದು ಅತ್ತೆಗೆ ತಿಳಿದಿರಲಿಲ್ಲ.

ಅಂದು ಮೋಹನ್ ಕುಮಾರ್, ಯುವತಿಯನ್ನು ನೇರವಾಗಿ ಮಡಿಕೇರಿಗೆ ಕರೆದುಕೊಂಡ ಹೋಗಿ ಅಲ್ಲಿ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ್ದನು. ಮರುದಿನ ಆಕೆಯನ್ನು ಅತ್ಯಾಚಾರಗೈದು ಸೈನೆಡ್ ನೀಡಿ ಕೊಲೆಗೆ ಮಾಡಿದ್ದ. ಕೊಲೆಯಾದ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನಾಭರಣವನ್ನು ಮೋಹನಕುಮಾರ್ ದೋಚಿ ಮಂಗಳೂರಿನ ಫೈನಾನ್ಸ್‌ವೊಂದರಲ್ಲಿ ಅಡವಿರಿಸಿದ್ದನು.

2009ರ ಅಕ್ಟೋಬರ್ 21ರಂದು ಬಂಟ್ವಾಳದಲ್ಲಿ ಬಂಧಿತನಾದ ಮೋಹನ್ ಕುಮಾರ್ ಸೈನೆಡ್ ನೀಡಿ ಯುವತಿಯರನ್ನು ಕೊಲೆ ಮಾಡಿರುವುದನ್ನು ಬಾಯಿಬಿಟ್ಟಿದ್ದನು. ಈ ವೇಳೆ ಮಂಜೇಶ್ವರದ ಯುವತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಪೊಲೀಸರು ಮೋಹನ ಕುಮಾರ್‌ನನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದರು. ಮಂಜೇಶ್ವರ ಪೊಲೀಸ್ ಠಾಣೆಗೆ ಕರೆತಂದ ಮೋಹನ ಕುಮಾರನನ್ನು ನೋಡಿದ ಮೃತ ಯುವತಿಯ ಅತ್ತೆ, ‘ಈತನೇ ಸುಧಾಕರ’ ಎಂದು ಗುರುತು ಹಿಡಿದಿದ್ದರು. ಅಲ್ಲದೆ, ಮೋಹನ ಕುಮಾರ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ಸಾಕ್ಷಿಯನ್ನು ಕೂಡ ತನಿಖೆಗೆ ಬಳಸಿಕೊಳ್ಳಲಾಗಿತ್ತು.

Body:ಪ್ರಕರಣಕ್ಕೆ ಸಂಬಂಧಿಸಿ 41 ಸಾಕ್ಷಿ, 50 ದಾಖಲೆ ಹಾಗೂ 42 ಸೊತ್ತುಗಳನ್ನು ಪರಿಶೀಲನೆ ನಡೆಸಲಾಗಿದ್ದು, ಮೋಹನ್‌ ಕುಮಾರ್ ಮೇಲಿನ ಆರೋಪ ಐಪಿಸಿ ಸೆಕ್ಷನ್ 302 (ಕೊಲೆ) ಅಪರಾಧಕ್ಕೆ ಜೀವನಪರ್ಯಂತ ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಒಂದು ವರ್ಷ ಸಾದಾ ಸಜೆ, ಸೆಕ್ಷನ್ 328 (ವಿಷ ಉಣಿಸಿದ್ದು) ಅಪರಾಧಕ್ಕೆ 10 ವರ್ಷ ಜೈಲುಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಆರು ತಿಂಗಳು ಸಾದಾ ಸಜೆ, ಸೆಕ್ಷನ್ 392 (ಚಿನ್ನಾಭರಣ ಸುಲಿಗೆ)ಅಪರಾಧಕ್ಕೆ ಐದು ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಒಂದು ವರ್ಷ ಸಾದಾ ಸಜೆ, ಸೆಕ್ಷನ್ 394 (ಸುಲಿಗೆಗಾಗಿ ವಿಷ ಪ್ರಾಶನ) ಅಪರಾಧಕ್ಕೆ 10 ವರ್ಷ ಕಠಿಣ ಶಿಕ್ಷೆ, 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಎರಡು ವರ್ಷಗಳ ಕಾಲ ಸಾದಾ ಜೈಲುಶಿಕ್ಷೆ, ಸೆಕ್ಷನ್ 417 (ವಂಚನೆ) ಅಪರಾಧಕ್ಕೆ ಒಂದು ವರ್ಷ ಸಾದಾ ಸಜೆ, ಸೆಕ್ಷನ್ 201 (ಸಾಕ್ಷಿನಾಶ) ಅಪರಾಧಕ್ಕೆ ಏಳು ವರ್ಷ ಕಠಿಣ ಶಿಕ್ಷೆ ಹಾಗೂ 5,000 ರೂ. ರೂ. ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದ್ದಲ್ಲಿ ಒಂದು ವರ್ಷ ಸಾದಾ ಜೈಲುಶಿಕ್ಷೆ ಅನುಭವಿಸಲು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಆರೋಪಿಯ ವಿರುದ್ಧದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣವನ್ನು ಸಾಕ್ಷ್ಯಾಧಾರದ ಕೊರತೆಯ ಹಿನ್ನೆಲೆಯಲ್ಲಿ ಕೈಬಿಡಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರುವ ಆರೋಪಿ ಮೋಹನ ಕುಮಾರ್‌ಗೆ ಜಿಲ್ಲಾ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈಯೀದುನ್ನೀಸಾ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆಯನ್ನು ನೀಡಿದರು.

ಆರೋಪಿ ಮೋಹನ್ ಕುಮಾರ್ ವಿರುದ್ಧ 20 ಕೇಸುಗಳು ದಾಖಲಾಗಿದ್ದು, ಈ ಪೈಕಿ 15 ಕೇಸುಗಳಲ್ಲಿ 10ಕ್ಕೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಐದು ಕೇಸುಗಳು ವಜಾಗೊಂಡಿದ್ದು, ಇನ್ನು ಐದು ಕೇಸುಗಳು ವಿಚಾರಣೆಗೆ ಬಾಕಿಯಿದೆ.

ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಒ.ಎಂ.ಕ್ರಾಸ್ತಾ ವಾದಿಸಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.