ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 680ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 123 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 30515 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 147 ಮಂದಿ ಗುಣಮುಖರಾಗಿದ್ದು, ಈವರೆಗೆ 28146 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1687 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 261357 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 230842 ಮಂದಿಯ ವರದಿ ನೆಗೆಟಿವ್ ಬಂದಿದೆ. ಈವರೆಗೆ 10991 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ರೂ. 1207627 ದಂಡ ವಸೂಲಿ ಮಾಡಲಾಗಿದೆ.