ETV Bharat / state

ದ.ಕ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೆ ಕೊರೊನಾ! - ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮಾಧ್ಯಮ ಸಂಚಾಲಕನಾಗಿ ಕಾರ್ಯನಿರ್ವಹಿಸಿ ಕಳೆದೆರಡು ದಿನದ ಹಿಂದೆ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ವ್ಯಕ್ತಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Dakshina Kannada
ಮಂಗಳೂರು
author img

By

Published : Jul 4, 2020, 8:37 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೂ ಸಹ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ತಮ್ಮ ಫೇಸ್​​ಬುಕ್ ಪೇಜ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ತನಗೆ ಕೋವಿಡ್-19 ಸೋಂಕು ದೃಢಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ಎಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಸೋಂಕಿನಿಂದ ಗುಣಮುಖನಾಗಿ ಬರುತ್ತೇನೆ ಎಂದು ಬರೆದಿದ್ದಾರೆ.

ಜ್ವರ ಹಾಗೂ ಕೆಮ್ಮು ಹೀಗೆ ಸೋಂಕಿನ ಲಕ್ಷಣ ಕಂಡು ಬಂದಿರುವ ಹಿನ್ನೆಲೆ ಸ್ವಯಂಪ್ರೇರಿತರಾಗಿ ಅವರೇ ಖಾಸಗಿ ಆಸ್ಪತ್ರೆಗೆ ತೆರಳಿ ಗಂಟಲು ದ್ರವದ ಮಾದರಿಯ ತಪಾಸಣೆ ಮಾಡಿಸಿದ್ದಾರೆ‌. ಇಂದು ಅದರ ವರದಿ ಬಂದಿದ್ದು, ಸೋಂಕು ದೃಢಗೊಂಡಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

ದ.ಕ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ಆಗಿದ್ದ ಇವರು, ಎರಡು ದಿನದ ಹಿಂದೆಯಷ್ಟೇ ದ.ಕ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.