ETV Bharat / state

ಸರಣಿ ಹತ್ಯೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶಾಂತಿ ಸಭೆ ಆಯೋಜನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಇಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.

dakshina kannada dc
ಶಾಂತಿ ಸಭೆ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
author img

By

Published : Jul 30, 2022, 7:19 AM IST

Updated : Jul 30, 2022, 7:56 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿರುವುದರಿಂದ ಇಂದು ಶಾಂತಿ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಡಿಸಿ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಧರ್ಮದ ಹಾಗೂ ಸಮುದಾಯದ ಮುಖಂಡರ ಉಪಸ್ಥಿತಿಯಲ್ಲಿ ಈ ಶಾಂತಿ ಸಭೆ ನಡೆಯಲಿದೆ. ಈ ಸಂದರ್ಭ ಜಿಲ್ಲೆಯ ಶಾಂತಿ - ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರಿಂದಲೂ ಸಲಹೆ ಸೂಚನೆಗಳನ್ನು ಪಡೆಯಲಾಗುವುದು. ಜಿಲ್ಲಾಡಳಿತದ ಮುಂದಿನ ನಿಯಮ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹಾಗೂ ಕಟ್ಟೆಚ್ಚರ ವಹಿಸುವ ಕುರಿತೂ ಸೂಚನೆ ನೀಡಲಾಗುತ್ತದೆ ಎಂದು ಹೇಳಿದರು.

ಶಾಂತಿ ಸಭೆ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

144 ಸೆಕ್ಷನ್ ಜಾರಿ ಮಾಡಲಾಗಿರುವುದರಿಂದ ಜನರು ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಉದ್ವಿಗ್ನ ಸ್ಥಿತಿಯಿದ್ದರೂ, ಸದ್ಯದ ಮಟ್ಟಿಗೆ ಪರಿಸ್ಥಿತಿ ಶಾಂತವಾಗಿದೆ. ಸರಣಿ ಹತ್ಯೆ ನಿಲ್ಲಿಸಲು ಪೊಲೀಸ್ ಕಮಿಷನರ್ ಹಾಗೂ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸರ್ವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕೆಎಸ್ಆರ್​ಪಿ ಬೆಟಾಲಿಯನ್ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಚೆಕ್ ಪೋಸ್ಟ್: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾ ಗಡಿ ಮತ್ತು ಕೇರಳ ರಾಜ್ಯ ಗಡಿ ಸೇರಿದಂತೆ 19 ಕಡೆ ಚೆಕ್ ಪೋಸ್ಟ್ ತೆರೆದು ಪರಿಶೀಲನೆ ನಡೆಸಲಾಗುತ್ತಿದೆ. ನಿನ್ನೆ ಸಂಜೆ 6 ಗಂಟೆಯಿಂದ ಇಂದು ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಈ ಆದೇಶ ಆಗಷ್ಟ್ 1ರವರೆಗೆ ಸಂಜೆ 6ರಿಂದ ಬೆಳಗ್ಗೆ 6ವರೆಗೆ ಇರಲಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಆಗಷ್ಟ್ 1ವರೆಗೆ, ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಆಗಷ್ಟ್ 6ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಸರಣಿ ಹತ್ಯೆ ಹಿನ್ನೆಲೆ: ಶುಕ್ರವಾರ ದ‌ಕ್ಷಿಣ ಕನ್ನಡ ಜಿಲ್ಲೆ ಸಂಜೆಯ ಬಳಿಕ‌ ಸಂಪೂರ್ಣ ಸ್ತಬ್ಧ

Last Updated : Jul 30, 2022, 7:56 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.