ಮಂಗಳೂರು: ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಮಿಂಚಿನ ನೋಂದಣಿ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದರು.
ಜ.6 ರಿಂದ 8 ರವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು, 18 ವರ್ಷ ಪ್ರಾಯ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೇ ಇರುವವವರು ತಮ್ಮ ಹೆಸರನ್ನು ಸೇರಿಸಬಹುದು ಎಂದು ತಿಳಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆಯ ಕರಡು ಪಟ್ಟಿಯು ಡಿ.16 ರಂದು ಪ್ರಕಟಗೊಂಡಿದ್ದು, ಹಕ್ಕು ಮತ್ತು ಆಕ್ಷೇಪಣೆಗಳನ್ನು ಜ.15 ರವರೆಗೆ ಮಾಡಬಹುದಾಗಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಫೆ.7 ರಂದು ಹೊರಬೀಳಲಿದೆ ಎಂದರು.