ETV Bharat / state

ಬಂಟ್ವಾಳದಲ್ಲಿ ಕಂಟೈನ್ಮೆಂಟ್ ಪ್ರದೇಶ ವೀಕ್ಷಿಸಿದ ಜಿಲ್ಲಾಧಿಕಾರಿ ಸಿಂಧು ರೂಪೇಶ್​​​​​​​​​ - ಕಂಟೈನ್ಮೆಂಟ್ ಪ್ರದೇಶ ವೀಕ್ಷಿಸಿದ ಜಿಲ್ಲಾಧಿಕಾರಿ ಸಿಂಧು ರೂಪೇಶ್​​​​​​​​​

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಇಂದು ಬೆಳಗ್ಗೆ ಬಂಟ್ವಾಳಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಪುರಸಭೆಯ ಸಹಾಯವಾಣಿಗೂ ಭೇಟಿ ನೀಡಿದ ಅವರು ಅಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.

Dakshina kannada DC
ಸಿಂಧು ರೂಪೇಶ್​​​​​​​​​
author img

By

Published : Apr 22, 2020, 5:13 PM IST

ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ಪೇಟೆಯ ಹೃದಯಭಾಗದಲ್ಲಿರುವ ಪ್ರದೇಶದಲ್ಲಿ ಕೋವಿಡ್​​​​ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಪುರಸಭಾ ವ್ಯಾಪ್ತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ದೂರವಾಣಿ ಸಂಖ್ಯೆ ಇರುವ ಕರಪತ್ರಗಳನ್ನು ನೀಡಲಾಗಿದ್ದು, ಪುರಸಭೆ ಸಹಾಯವಾಣಿಯ ಸಂಖ್ಯೆಯನ್ನೂ ಒದಗಿಸಲಾಗಿ್ದು ಇದರ ಕಾರ್ಯಚಟುವಟಿಕೆಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿ ಸಮಾಧಾನ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕಂಟೈನ್ಮೆಂಟ್ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ರೇಷನ್ ಅಂಗಡಿಗಳನ್ನು ಅದರ ಹೊರಗಿನ ಭಾಗಕ್ಕೆ ಸ್ಥಳಾಂತರಗೊಳಿಸುವಂತೆ ಅವರು ಸೂಚನೆ ನೀಡಿದರು. ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್.ಆರ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಹಾಗೂ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.