ETV Bharat / state

ಕೊರೊನಾ ನಿಯಂತ್ರಣದಲ್ಲಿ ಕರ್ತವ್ಯಲೋಪ ಎಸಗಿದರೆ ಅಧಿಕಾರಿಗಳ ಅಮಾನತು: ದ.ಕ. ಡಿಸಿ ಎಚ್ಚರಿಕೆ

ನಗರಸಭೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೊರೊನಾ ನಿಯಂತ್ರಣ, ಪರೀಕ್ಷೆ ಹಾಗೂ ಕ್ವಾರಂಟೈನ್‌ನಲ್ಲಿ ಇರುವವರ ಕುರಿತು ಹೆಚ್ಚಿನ ನಿಗಾವಹಿಸಬೇಕು. ನಿಯಂತ್ರಣ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

dakshina-kannada-dc-talk-about-corona-issue
ಕೊರೊನಾ ನಿಯಂತ್ರಣಕ್ಕೆ ಗಂಭೀರ ಪ್ರಯತ್ನ, ಕರ್ತವ್ಯಲೋಪ ಎಸಗಿದರೆ ಅಧಿಕಾರಿಗಳ ಅಮಾನತು: ದ.ಕ. ಡಿಸಿ ಎಚ್ಚರಿಕೆ
author img

By

Published : Oct 9, 2020, 8:45 PM IST

ಪುತ್ತೂರು: ಕೊರೊನಾ ವೈರಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ ಮೊದಲ ಜಿಲ್ಲೆಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆ ಸೇರಿದ್ದು, ಸೋಂಕು ನಿಯಂತ್ರಣಕ್ಕೆ ಗಂಭೀರ ಪ್ರಯತ್ನ ನಡೆಯಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ನಿಯಂತ್ರಣಕ್ಕೆ ಗಂಭೀರ ಪ್ರಯತ್ನ, ಕರ್ತವ್ಯಲೋಪ ಎಸಗಿದರೆ ಅಧಿಕಾರಿಗಳ ಅಮಾನತು: ದ.ಕ. ಡಿಸಿ ಎಚ್ಚರಿಕೆ

ನಗರಸಭೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೊರೊನಾ ನಿಯಂತ್ರಣ, ಪರೀಕ್ಷೆ ಹಾಗೂ ಕ್ವಾರಂಟೈನ್‌ನಲ್ಲಿ ಇರುವವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ನಿಯಂತ್ರಣ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯತ್‌ಗಳಲ್ಲಿ ಆಡಳಿತ ಮಂಡಳಿಗಳಿಲ್ಲ. ಗ್ರಾಮ ಪಂಚಾಯತ್‌ಗಳಿಗೆ ನೇಮಕಗೊಂಡಿರುವ ಆಡಳಿತಾಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆಯ ಸಹಕಾರದೊಂದಿಗೆ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳ ಕುರಿತು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಲ್ಲಿಯವರೆಗೆ ಕೊರೊನಾದಿಂದ 53 ಮಂದಿ ಸಾವನ್ನಪ್ಪಿದ್ದಾರೆ. ಉಭಯ ತಾಲೂಕುಗಳಲ್ಲಿ ಒಟ್ಟು 2039 ಪ್ರಕರಣಗಳು ವರದಿಯಾಗಿದ್ದು, ಈಗ 321 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ ಸಾವು ಸಂಭವಿಸದಂತೆ ಸೋಂಕಿತರ ಕುರಿತು ಬಹಳಷ್ಟು ಎಚ್ಚರಿಕೆ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಕೆ. ಅಶೋಕ್ ಕುಮಾರ್ ರೈ ಅವರಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.

ಕ್ವಾರಂಟೈನ್ ನಿಯಮ ಪಾಲಿಸದವರ ವಿರುದ್ಧ ಪೊಲೀಸರ ಸಹಕಾರದೊಂದಿಗೆ ಪ್ರಕರಣ ದಾಖಲಿಸಲು ಯಾವುದೇ ಹಿಂಜರಿಕೆ ಬೇಡ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಮುನ್ನೆಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಶಾಸಕ ಸಂಜೀವ ಮಠಂದೂರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಶಾಲಾರಂಭದ ಕುರಿತಂತೆ ಅ. 15ರಿಂದ ಶಾಲೆಗಳನ್ನು ಆರಂಭಿಸುವಂತೆ ಸರ್ಕಾರ ತಿಳಿಸಿದ್ದರೂ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೋಷಕರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ಒತ್ತಾಯ ಹೇರಬಾರದು. ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಪಾಡುವ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.