ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಕೊರೊನಾಕ್ಕೆ 7 ಮಂದಿ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 99ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರಲ್ಲಿ ಕೇರಳ ರಾಜ್ಯದ ಪಾಲಕ್ಕಾಡ್, ಉತ್ತರ ಕನ್ನಡ, ದಾವಣಗೆರೆ ಜಿಲ್ಲೆಯ ತಲಾ ಒಬ್ಬರು ಸಾವನ್ನಪ್ಪಿದ್ದು, ಇನ್ನುಳಿದ ನಾಲ್ಕು ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ.
ಒಂದೇ ದಿನದಲ್ಲಿ 218 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಪ್ರಾಥಮಿಕ ಸಂಪರ್ಕದಿಂದ 36 ಮಂದಿಗೆ, ಐಎಲ್ಐ ಪ್ರಕರಣದಿಂದ 110 ಮಂದಿಗೆ, ಸಾರಿ ಪ್ರಕರಣದಿಂದ 16 ಮಂದಿಗೆ ಕೊರೊನಾ ದೃಢಪಟ್ಟರೆ ಇನ್ನೂ 57 ಮಂದಿಯ ಸಂಪರ್ಕದ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ 4,214 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 118 ಮಂದಿ ಗುಣಮುಖರಾಗಿದ್ದು, ಈವರೆಗೆ 1862 ಮಂದಿ ಗುಣಮುಖರಾಗಿದ್ದಾರೆ. 2253 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.