ಮಂಗಳೂರು: ನಟ ದರ್ಶನ್ ಇಂದು ದಕ್ಷಿಣ ಕನ್ನಡದ ಪ್ರವಾಸದಲ್ಲಿ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಮುಂಜಾನೆ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಅವರು ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಅಲ್ಲಿಂದ ಪೂಜೆ ಮುಗಿಸಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ರು. ದೇವಸ್ಥಾನದ ಭೇಟಿ ವೇಳೆಯಲ್ಲಿ ಅಭಿಮಾನಿಗಳು ನೆಚ್ಚಿನ ನಟನನ್ನು ಕಂಡು ಹರ್ಷ ವ್ಯಕ್ತಪಡಿಸಿದರು.