ಮಂಗಳೂರು : ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ರಥವನ್ನು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಬಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಈ ರಥಯಾತ್ರೆಯು ಎರಡು ದಿನಗಳ ಕಾಲ ಪ್ರತೀ ತಾಲೂಕಿಗೂ ಸಂಚರಿಸಿ, ಬಾಲಕಾರ್ಮಿಕ ನಿರ್ಮೂಲನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಿದೆ. ಈ ಬಾಲ ಕಾರ್ಮಿಕ ವಿರೋಧಿ ಕಾಯ್ದೆಯ ಬಗ್ಗೆ ಎಲ್ಲರಿಗೂ ಅರಿವು ಉಂಟಾಗಲಿ. ಯಾರೂ ಮಕ್ಕಳನ್ನು ಕೆಲಸಕ್ಕೆ ತೊಡಗಿಸದಿರಲಿ ಎಂದು ಆಶಿಸಿದರು.
ಈ ಸಂದರ್ಭ ಪ್ರಧಾನ ಜಿಲ್ಲಾ ಕುಟುಂಬ ನ್ಯಾಯಾಧೀಶ ರವಿ ನಾಯಕ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎ ಜೆ ಗಂಗಾಧರ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅನಿತಾ, ಕಾರ್ಮಿಕ ಅಧಿಕಾರಿ ಕೆ ಬಿ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.